ಬಿ.ಸಿ.ರೋಡ್ ಬಿಜೆಪಿ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಗತಿ ಕುರಿತ ಸಭೆಯಲ್ಲಿ ಶಾಸಕ ರಾಜೇಶ್ ನಾಕ್ ಮಾತನಾಡಿದರು. ಬಂಟ್ವಾಳದ ಪ್ರಭಾರಿ ರಾಕೇಶ್ ರೈ ಕಡೆಂಜಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್ ಮೊದಲಾದವರಿದ್ದರು.
ಬಂಟ್ವಾಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಮಹತ್ವದ ಕಾರ್ಯವಾಗಿದೆ. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷ ಕಂಡುಬರದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಹೇಳಿದರು.
ಬಿಜೆಪಿ ಬಂಟ್ವಾಳ ಮಂಡಲದಿಂದ ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿ ಕುರಿತು ಬಿ.ಸಿ.ರೋಡ್‌ನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿಗತಿ, ಬಾಕಿ ಉಳಿದಿರುವ ಅರ್ಜಿಗಳ ಮಾಹಿತಿ ಹಾಗೂ ಆನ್‌ಲೈನ್ ಅಪ್ಲೋಡ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ ರಾಕೇಶ್ ರೈ ಕಡೆಂಜಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜೆ, ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಮುಖರಾದ ಬಿ.ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಪಕ್ಷದ ವಿವಿಧ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು, ಬೂತ್ ಮಟ್ಟದ ಜವಾಬ್ದಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.