ಉಡುಪಿಯ ತೆಂಕನಿಡಿಯೂರು ಕಾಲೇಜಿನಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜಿ ಮಾತನಾಡಿದರು. ಪ್ರೊ. ನಿತ್ಯಾನಂದ್ ವಿ. ಗಾಂವ್ಕರ್, ಡಾ.ಚಂದ್ರು ಹೆಗಡೆ, ಪ್ರಶಾಂತ್ ನೀಲಾವರ ಇದ್ದರು.
* ಕಡಪದ ರಾಮಕೃಷ್ಣ ಮಿಷನ್ನ ಸ್ವಾಮಿ ಅನುಪಮಾನಂದಜಿ ಮಾಹಿತಿ
* ತೆಂಕನಿಡಿಯೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸ
ಉಡುಪಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾಮಿ ವಿವೇಕಾನಂದರು ಆಧ್ಯಾತ್ಮಿಕ ಸಂಘಟನೆಗೆ ಸ್ಫೂರ್ತಿಯಾಗಿದ್ದರು. 'ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಅವರ ವಾಣಿಯು ರಾಷ್ಟ್ರೀಯವಾದಿಗಳಲ್ಲಿ ನಿರ್ಭೀತ ನಡೆಗೆ ಕಾರಣವಾಯಿತು. ತಿಲಕ್, ಅರವಿಂದ್ ಘೋಷ್, ಮಹಾತ್ಮ ಗಾಂಧಿ, ಭಗತ್ಸಿಂಗ್ ಮುಂತಾದ ಅನೇಕ ಹೋರಾಟಗಾರರು ವಿವೇಕಾನಂದರ ಚಿಂತನೆಗಳಿಂದ ಪ್ರೇರಿತರಾಗಿದ್ದರು ಎಂದು ಕಡಪದ ರಾಮಕೃಷ್ಣ ಮಿಷನ್ನ ಮುಖ್ಯಸ್ಥ ಸ್ವಾಮಿ ಅನುಪಮಾನಂದಜಿ ತಿಳಿಸಿದರು.
ಉಡುಪಿಯ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಹಕಾರದಲ್ಲಿ ಆಯೋಜಿಸಿದ್ದ 'ಸ್ವಾಮಿ ವಿವೇಕಾನಂದರು: ಭಾರತದ ಸ್ವಾತಂತ್ರ್ಯ ಚಳವಳಿಯ ಸ್ಫೂರ್ತಿದಾಯಕ ಶಕ್ತಿ' ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ್ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ.ಜಯಮಂಗಳಾ, ಗ್ರಂಥ ಪಾಲಕ ಕೃಷ್ಣ ಸಾಸ್ತಾನ, ಕನ್ನಡ ಸಹಾಯಕ ಪ್ರಾಧ್ಯಾಪಕ ಮಾರುತಿ, ಸಂಖ್ಯಾಶಾಸ್ತ್ರ ಪ್ರಾಧ್ಯಾಪಕ ಉಮೇಶ್ ಪೈ, ರಾಜ್ಯಶಾಸ್ತ್ರ ಉಪನ್ಯಾಸಕಿ ಆರತಿ ಜಿ., ಇತಿಹಾಸ ಉಪನ್ಯಾಸಕಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಚಂದ್ರು ಹೆಗಡೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಘು ನಾಯ್ಕ್ ವಂದಿಸಿದರು. ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು.