ಮಣಿಪಾಲದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು
ಕಾರ್ಕಳ: ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ದೈಹಿಕ ಹಾಗೂ ಮಾನಸಿಕವಾಗಿಯೂ ಅತ್ಯಂತ ಪ್ರಯೋಜನಕಾರಿಯಾದ ಕ್ರೀಡೆಯಲ್ಲಿ ನಿತ್ಯ ನಾವು ತೊಡಗಿಕೊಳ್ಳುವುದರ ಮೂಲಕ ಜೀವನದಲ್ಲಿ ಲವಲವಿಕೆಯೊಂದಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿ ಕರಿಷ್ಮಾ ಸನಿಲ್ ಹೇಳಿದರು.
ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜು ನಾಗಬನ ಕ್ಯಾಂಪಸ್ ಮತ್ತು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಜಂಟಿಯಾಗಿ ವಿದ್ಯಾನಗರ ಗ್ರೀನ್ಸ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಐಕ್ಯಮ್ ಸ್ಪೋಟ್ಸ್ ಸೈನ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ರೋಹನ್ ಕೆ. ಮಾತನಾಡಿ, ಎಲ್ಲ ಕ್ರೀಡೆಗಳಿಗೂ ಸಮಾನ ಆದ್ಯತೆ ಸಿಗಬೇಕು. ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಸದುಪಯೋಗ ಪಡಿಸಿಕೊಂಡರೆ ಅಂತಾರಾಷ್ಟ್ರೀಯಮಟ್ಟದಲ್ಲಿ ಭಾರತ ಮುಂಚೂಣಿಯಲ್ಲಿರಲು ಸಾಧ್ಯವಾಗುವುದು ಎಂದರು.
ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಪ್ರಾಂಶುಪಾಲ ಸಂತೋಷ್, ಮಣಿಪಾಲ ಜ್ಞಾನಸುಧಾ ಕಾಲೇಜು ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಪ್ರಕಾಶ್ ಜೋಗಿ, ಹೇಮಂತ್ ನಾಯಕ್, ಉಪನ್ಯಾಸಕರು, ಉಪನ್ಯಾಸಕೇತರರು ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಉಪ ಪ್ರಾಂಶುಪಾಲ ರವಿ ಜಿ. ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ನಕ್ಷಾ ಕಲ್ಕೂರ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್ ವಂದಿಸಿದರು.