ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟವನ್ನು ಉದ್ಯಮಿ ಚಂದ್ರೇಶ್ ಶೆಟ್ಟಿ ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ಜೆರಾಲ್ಡ್ ಸಂತೋಷ್ ಡಿಸೋಜ, ಬೆಂಗಳೂರಿನ ಲೆಕ್ಕಪರಿಶೋಧಕ ರಾಘವೇಂದ್ರ ಶೆಟ್ಟಿ, ಪಿಡಿಒ ಹರೀಶ್ ಕುಮಾರ್ ಶೆಟ್ಟಿ ಇದ್ದರು. 
ಉಡುಪಿ

ಶಿಸ್ತು, ಸಂಯಮಕ್ಕೆ ಕ್ರೀಡೆ ಸಹಕಾರಿ

ಕುಂದಾಪುರ: ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಸಂಯಮ ಬೆಳೆಸುತ್ತದೆ. ಕ್ರೀಡೆಯಿಂದ ಶಾರೀರಿಕ ಸದೃಢತೆ, ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಬೆಳೆಯುತ್ತದೆ. ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಉದ್ಯಮಿ ಚಂದ್ರೇಶ್ ಶೆಟ್ಟಿ ಹೇಳಿದರು.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ(ಉಡುಪಿ ವಲಯ)ವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ಜೆರಾಲ್ಡ್ ಸಂತೋಷ್ ಡಿಸೋಜ, ಬೆಂಗಳೂರಿನ ಲೆಕ್ಕಪರಿಶೋಧಕ ರಾಘವೇಂದ್ರ ಶೆಟ್ಟಿ, ಪಿಡಿಒ ಹರೀಶ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು.
ಮಂಗಳೂರು ವಿಶ್ವವಿದ್ಯಾಲಯದಿಂದ ವೀಕ್ಷಕರಾಗಿ ಆಗಮಿಸಿದ ಡಾ.ಮನೋಜ್ ಕುಮಾರ್, ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಶಂಕರನಾರಾಯಣ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಪ್ರೊ.ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.