301ನೇ ವಾರದ ಪರಿಸರಸ್ನೇಹಿ ಅಭಿಯಾನ ಕಾರ್ಯಕ್ರಮದಲ್ಲಿ ಉಡುಪಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣ ಪೂಜಾರಿ, ಪ್ರಮುಖರಾದ ಅಜಿತ್ ಆಚಾರ್, ದಿನೇಶ್ ಆಚಾರ್, ಲಲಿತಾ ಪೂಜಾರಿ ಮತ್ತಿತರರಿದ್ದರು.
- ಕೃಷ್ಣ ಪೂಜಾರಿ ಪಿ. ಅಭಿಮತ
- ಪರಿಸರಸ್ನೇಹಿ ಅಭಿಯಾನ
ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರು ಜಾಗೃತರಾಗಬೇಕು. ಗಲ್ಲಿ ಗಲ್ಲಿಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ. ನಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದೆ. ಆದರೆ ವಿದ್ಯಾವಂತರೇ ಕಸ ಎಸೆಯುವ ಮನಸ್ಥಿತಿ ಸೃಷ್ಟಿಸಿಕೊಂಡಿರುವುದು ಬೇಸರದ ಸಂಗತಿ ಎಂದು ಉಡುಪಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣ ಪೂಜಾರಿ ಪಿ. ಹೇಳಿದರು.
ಕೋಟ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಗೀತಾನಂದ ಫೌಂಡೇಶನ್, ಮಣೂರು ಫ್ರೆಂಡ್ಸ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ, ಕೋಡಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಭಾನುವಾರ ನಡೆದ 301ನೇ ವಾರದ ಪರಿಸರಸ್ನೇಹಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
400 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ತೆರವು
301ನೇ ವಾರದ ಪರಿಸರಸ್ನೇಹಿ ಅಭಿಯಾನ ಕಾರ್ಯಕ್ರಮದಲ್ಲಿ ಉಡುಪಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣ ಪೂಜಾರಿ, ಪ್ರಮುಖರಾದ ಅಜಿತ್ ಆಚಾರ್, ದಿನೇಶ್ ಆಚಾರ್, ಲಲಿತಾ ಪೂಜಾರಿ ಮತ್ತಿತರರಿದ್ದರು. 30ಕ್ಕೂ ಅಧಿಕ ಚೀಲಗಳಲ್ಲಿ 400 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಬೀಚ್ ರಸ್ತೆಯಿಂದ ತೆರವುಗೊಳಿಸಲಾಯಿತು. ಪಂಚವರ್ಣ ಯುವಕ ಮಂಡಲ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.