ಇನ್ನಂಜೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಡಾ.ರಾಧಾಕೃಷ್ಣ ಐತಾಳ್ ಉದ್ಘಾಟಿಸಿದರು. ಪ್ರಮುಖರಾದ ಡಾ.ವೈ.ಎನ್.ಶೆಟ್ಟಿ, ರಾಜೇಂದ್ರ ಪ್ರಭು, ಸುಬ್ರಹ್ಮಣ್ಯ ಜಿ.ಕುರ್ಯ ಮೊದಲಾದವರಿದ್ದರು.
ಪಡುಬಿದ್ರಿ: ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜಗತ್ತಿನ ವಿದ್ಯಮಾನಗಳನ್ನು ತಿಳಿದುಕೊಂಡಲ್ಲಿ ಭವಿಷ್ಯದಲ್ಲಿ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕಷ್ಣ ಐತಾಳ್ ಹೇಳಿದರು.
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇನ್ನಂಜೆ ಎಸ್‌ವಿಎಚ್ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿ.ಬಿ.ಜಯಂತ್ ಪಡುಬಿದ್ರಿ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಜಾನಪದ ಚಿಂತಕ ಡಾ.ವೈ.ಎನ್.ಶೆಟ್ಟಿ ಅವರು ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ವಿತರಿಸಿದರು. ಪತ್ರಕರ್ತ ಜಾನ್ ಡಿಸೋಜ ಕುಂದಾಪುರ ಉಪನ್ಯಾಸ ನೀಡಿದರು. ಪತ್ರಿಕೋದ್ಯಮ ವಿದ್ಯಾರ್ಥಿನಿ ಮಂಗಳಾ ಶಿರ್ವಪದವು ಅವರಿಗೆ ದತ್ತಿನಿಧಿ ಹಾಗೂ ಇನ್ನಂಜೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಕಾರ್ಯದರ್ಶಿ ಸುರೇಶ್ ಎರ್ವಾಳು, ಎಸ್.ವಿ.ಎಚ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಸ್ವಾಗತಿಸಿದರು. ಜಿಲ್ಲಾ ಸಮಿತಿ ಸದಸ್ಯ ಹರೀಶ್ ಹೆಜವಾಡಿ ಪ್ರಸ್ತಾವನೆಗೈದರು. ಪ್ರಕಾಶ ಸುವರ್ಣ ಕಟಪಾಡಿ ನಿರೂಪಿಸಿದರು. ಕೋಶಾಧಿಕಾರಿ ಸಂತೋಷ್ ಕಾಪು ವಂದಿಸಿದರು.