ರುಡ್‌ಸೆಟ್ ಸಂಸ್ಥೆಯ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರದ ಸಮಾರೋಪದಲ್ಲಿ ರಾಜೇಶ್ ಪೈ ಪ್ರಮಾಣಪತ್ರ ವಿತರಿಸಿದರು. ಪ್ರಮುಖರಾದ ಡಾ.ಅಶೋಕ ಕುಮಾರ್, ಬಿ.ಪಿ.ವಿಜಯ ಕುಮಾರ್ ಇತರರಿದ್ದರು. 
ಉಡುಪಿ

ದೃಢ ಸಂಕಲ್ಪದಿಂದ ಉದ್ಯಮದಲ್ಲಿ ಯಶಸ್ಸು

ಇಂದಿರಾ ಎನ್ ಕೆ
ಉಜಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್ ಮಾಲೀಕ ರಾಜೇಶ್ ಪೈ ಅಭಿಪ್ರಾಯಪಟ್ಟರು.
ಉಜಿರೆಯ ಸಿದ್ಧವನದ ರುಡ್‌ಸೆಟ್ ಸಂಸ್ಥೆ ಆಯೋಜಿಸಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಅಶೋಕ ಕುಮಾರ್ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಬಳಸಿ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಬೇಕು ಎಂದರು.
ಭೂಮಿಕಾ, ವೈಷ್ಣವಿ ಪ್ರಾರ್ಥಿಸಿದರು. ಶಿಬಿರಾರ್ಥಿಗಳಾದ ಸ್ವಾತಿಕ್ ಹೆಬ್ಬಾರ್, ಅನನ್ಯ ಟಿ ಅನುಭವ ಹಂಚಿಕೊಂಡರು. ಸಂಸ್ಥೆಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿ, ಪ್ರಸ್ತಾವನೆಗೈದು ನಿರೂಪಿಸಿದರು. ಕರುಣಾಕರ್ ಕೆ. ಜೈನ್ ವಂದಿಸಿದರು.