ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೋಮವಾರ ನಡೆದ ವಾರ್ಷಿಕ ಬಹುವಾನ ವಿತರಣಾ ಕಾರ್ಯಕ್ರಮದಲ್ಲಿ ಸಂದೀಪ್ ಗಾಣಿಗ ವಾತನಾಡಿದರು. ಡಾ.ಶುಭಕರಾಚಾರಿ ಮತ್ತಿತರರಿದ್ದರು.
ಕುಂದಾಪುರ: ಯಶಸ್ಸು ಎನ್ನುವುದು ಶಿಸ್ತು, ಶ್ರದ್ಧೆ ಮತ್ತು ಸತತ ಪ್ರಯತ್ನದಿಂದ ಬರುತ್ತದೆ. ಶಿಕ್ಷಣದ ಜತೆಗೆ ಮೌಲ್ಯಯುತ ಶಿಕ್ಷಣ ಪಡೆಯುವುದು ಮುಖ್ಯವಾಗುತ್ತದೆ. ಜೀವನದ ಸೋಲುಗಳು ಹೊಸ ಪಾಠವನ್ನು ಕೊಡುತ್ತವೆ. ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತವೆ. ಪ್ರತಿ ಒಳ್ಳೆಯ ಹೆಜ್ಜೆಗಳು ಎಲ್ಲವನ್ನೂ ಕೊಡುತ್ತವೆ ಎಂದು ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಅಭಿಪ್ರಾಯಪಟ್ಟರು.
ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೋಮವಾರ ವಾರ್ಷಿಕ ಬಹುವಾನ ವಿತರಣಾ ಕಾರ್ಯಕ್ರಮದಲ್ಲಿ ವಾತನಾಡಿದರು. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಉತ್ತಮ ಅಂಕ ಮತ್ತು ವಿಶೇಷ ಸಾಧನೆ ವಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕಿ ಸ್ನೇಹಾ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಬಹುವಾನ ವಿಜೇತರ ಪಟ್ಟಿ ವಾಚಿಸಿದರು. ವಾಣಿಜ್ಯ ಉಪನ್ಯಾಸಕಿ ಸುವಾ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಜೀವಶಾಸ ಉಪನ್ಯಾಸಕಿ ವಿದ್ಯಾರಾಣಿ ವಂದಿಸಿದರು.