ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆರ್ಶೀವಚನ ನೀಡಿದರು. ಪ್ರಮುಖರಾದ ಡಾ.ರವಿ ಶೆಟ್ಟಿ, ಮಿತ್ರಂಪಾಡಿ ಜಯರಾಮ ರೈ, ಹೇಮಂತ್ ರೈ ಮತ್ತಿತರರಿದ್ದರು.
ಕಡಬ: ಮನುಷ್ಯರ ಜೀವನ ಸುಂದರವಾಗಿರಬೇಕಾದರೆ ಧರ್ಮಹಾದಿಯಲ್ಲಿ ನಡೆಯಬೇಕು. ನಮ್ಮ ಆಚಾರ-ವಿಚಾರ ನಡೆ ನುಡಿಗಳು ಧರ್ಮದ ರಕ್ಷಣೆಗೆ ಉಪಯೋಗವಾಗಬೇಕು. ಆಸ್ತಿಕ ಸಮಾಜದಿಂದ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಶರವೂರು ಶ್ರೀ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಶುಕ್ರವಾರ ಧಾರ್ಮಿಕ ಸಭೆಯಲ್ಲಿ ಆರ್ಶೀವಚನ ನೀಡಿದರು.
ಡಾ.ಎಂ.ಪ್ರಭಾಕರ ಜೋಷಿ ಧಾರ್ಮಿಕ ಉಪನ್ಯಾಸ ನೀಡಿ, ನಮ್ಮ ದೇಶದ ಆತ್ಮ ಹಿಂದುತ್ವ, ಪರಂಪರಾಗತವಾಗಿ ಬಂದಿರುವ ಸಂಸ್ಕಾರ-ಸಂಸ್ಕೃತಿಗಳು ನಮ್ಮ ದೇಶವನ್ನು ಪರಮವೈಭವದಡೆಗೆ ಕೊಂಡೊಯ್ದಿದೆ ಎಂದರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಸಂಘ ಕತಾರಿನ ಅಧ್ಯಕ್ಷ ಡಾ.ರವಿ ಶೆಟ್ಟಿ ಮೂಡಂಬೈಲ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಮ ರೈ ಮಾತನಾಡಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತು ಅಧ್ಯಕ್ಷತೆ ವಹಿಸಿದ್ದರು.
ಎಸ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಮುಖರಾದ ಸತೀಶ್ ಕುಮಾರ್ ಕೆಡೆಂಜಿ, ಮನವಳಿಕೆಗುತ್ತಿನ ಯಾಜಮಾನ ರಾಮನಾಥ ರೈ, ರಾಮಕುಂಜೇಶ್ವರ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಕೊಯಿಲ ಶ್ರೀ ಸದಾಶಿವ ಮಹಾಗಣಪತಿ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಾಜ್ ಕುಮಾರ್ ರೈ ಆರುವಾರ, ಬೆಳ್ಳಾರೆ ಶ್ರೀ ಗೌರಿಪುರ ರಾಜರಾಜೇಶ್ವರಿ ದೇವಸ್ಥಾನ ಚಂದ್ರಹಾಸ ಮಣಿಯಾಣಿ ಉಪಸ್ಥಿತರಿದ್ದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಡ್ಡಿಲ್ಲಾಯ ಸ್ವಾಗತಿಸಿದರು. ಗಣರಾಜ್ ಕುಂಬ್ಳೆ, ಚಂದ್ರಹಾಸ ಕೆ.ಸಿ. ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ನಗ್ರಿ ವಂದಿಸಿದರು. ಬೆಳಗ್ಗೆ ವೈದಿಕ ಕಾರ್ಯಕ್ರಮ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.