ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ. 
ಉಡುಪಿ

20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವ್ಯವಸ್ಥೆ

ಉಡುಪಿ ಶಾಸಕ ಯಶಪಾಲ್​ ಸುವರ್ಣ ಮಾಹಿತಿ

* ಜೂ.1ರಂದು ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಜೂ.1ರಂದು ಶಾಲಾ ಪುನರಾರಂಭದಂದು ನಮ್ಮ ಪುಷ್ಪಾನಂದ ಫೌಂಡೇಷನ್​ ವತಿಯಿಂದ ಸಿಹಿ ತಿಂಡಿ ನೀಡಿ ಸ್ವಾಗತಿಸಲಾಗುವುದು ಎಂದು ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಶಾಲೆಯ 20 ಸಾವಿರ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ಷೇತ್ರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದೇವೆ. 
ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ನಡೆಯುವ ಮಕ್ಕಳ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶೈಕ್ಷಣಿಕ ಸಂಭ್ರಮಕ್ಕೆ ಸಾಕ್ಷಿಯಾಗಬೇಕೆಂದು ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.