ಉಡುಪಿ ಶಾಸಕ ಯಶ್ಪಾಲ್ ಸುವರ್ಣ.
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾಹಿತಿ
* ಉರ್ವ ಮಾರಿಯಮ್ಮ ದೇಗುಲದಲ್ಲಿ ಕಾರ್ಯಕ್ರಮ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಹಾಗೂ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 850 ವಿದ್ಯಾರ್ಥಿಗಳಿಗೆ ಜ.24ರಂದು ಮಧ್ಯಾಹ್ನ 3 ಗಂಟೆಗೆ ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಆಯೋಜಿಸಲಾಗಿದೆ ಎಂದು ಫೆಡರೇಷನ್ ಹಾಗೂ ಬ್ಯಾಂಕ್ನ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಮಾರಂಭ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಪ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮಣ ಕೋಡಿಕಲ್, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೆಂಗ್ರೆ, ದ.ಕ. ಜಿಲ್ಲಾ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್ ಉಳ್ಳಾಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷ ಗೌತಮ್ ಕೋಡಿಕಲ್, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್ ಸುವರ್ಣ, ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅನಿಲಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.