fine 
ಉಡುಪಿ

ಶೌಚ ತ್ಯಾಜ್ಯ ಸುರಿಯಲೆತ್ನಿಸಿದ ಟ್ಯಾಂಕರ್ ಮಾಲೀಕಗೆ ದಂಡ

ಕಾಸರಗೋಡು: ಮೊಗ್ರಾಲ್‌ಪುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಗೃಹದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ಸುರಿಯಲೆತ್ನಿಸಿದ ವಾಹನಕ್ಕೆ ನಾಗರಿಕರು ತಡೆಯೊಡ್ಡಿ, ನಂತರ ವಾಹನವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳು ವಾಹನದ ಮಾಲಿಕಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ಶೌಚ ತ್ಯಾಜ್ಯ ಸುರಿಯಲು ಯತ್ನಿಸುತ್ತಿದ್ದಾಗ ಸ್ಥಳೀಯ ನಿವಾಸಿಗಳು ವಾಹನಕ್ಕೆ ತಡೆಯೊಡ್ಡಿ ಕಾಸರಗೋಡು ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ತಲುಪಿದ ಪೊಲೀಸರು ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಳಿಕ ಪೊಲೀಸರು ನೀಡಿದ ಮಾಹಿತಿಯಂತೆ ಮೊಗ್ರಾಲ್ ಪುತ್ತೂರು ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಲಾರಿಯ ಮಾಲೀಕನಿಗೆ ದಂಡ ವಿಧಿಸಿದ್ದಾರೆ.