ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಆಟಿಲ್ ಒರಿ ನಾಲ್ ಕಾರ್ಯಕ್ರಮವನ್ನು ಆಚಾರ ಪಟ್ಟವರು, ಗುರಿಕಾರರು ಉದ್ಘಾಟಿಸಿದರು. ಉದ್ಯಮಿಗಳಾದ ಮಣಿ ಪ್ರಕಾಶ್, ಉಮೇಶ್ ಬೆಂಜನಪದವು, ಶ್ರೀ ಚೀರುಂಭ ಭಗವತಿ ಕ್ಷೇತ್ರ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ, ಕೋಶಾಧಿಕಾರಿ ಜಗದೀಶ್ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ನಮಗೆ ನಮ್ಮದೇ ಆದ ಸಂಪ್ರದಾಯವಿದೆ. ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆ ಸಮಾಜದ ಆಚಾರ, ವಿಚಾರ ಕಲಿಸಿ ಕೊಡಬೇಕು ಎಂದು ಶ್ರೀ ಚೀರುಂಭ ಭಗವತಿ ಕ್ಷೇತ್ರ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ ಅಭಿಪ್ರಾಯಪಟ್ಟರು.
ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ‘ಆಟಿಲ್ ಒರಿ ನಾಳ್’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಸ್ಕೃತ ಎಂ.ಎ.ಯಲ್ಲಿ ಚಿನ್ನದ ಪದಕ ಪಡೆದ ಶ್ರಾವ್ಯ ಅವರನ್ನು ಸನ್ಮಾನಿಸಲಾಯಿತು. 8ನೇ ತರಗತಿಯಿಂದ ಪದವಿವರೆಗೆ ಶಿಕ್ಷಣ ಪಡೆಯುತ್ತಿರುವ 304 ಮಂದಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಶ್ರೀ ಚೀರುಂಭ ಭಗವತಿ ಕ್ಷೇತ್ರದ ಆಚಾರ ಪಟ್ಟವರು, ಗುರಿಕಾರರು ಕಾರ್ಯಕ್ರಮ ಉದ್ಘಾಟಿಸಿದರು.
ಉದ್ಯಮಿಗಳಾದ ಮಣಿ ಪ್ರಕಾಶ್, ಉಮೇಶ್ ಬೆಂಜನಪದವು, ಶ್ರೀ ಕ್ಷೇತ್ರದ ಕೋಶಾಧಿಕಾರಿ ಜಗದೀಶ್ ಉಳ್ಳಾಲ್, ಮೊಕ್ತೇಸರ ರಾಘವ ಕೈಕಂಬ, ಉಪಾಧ್ಯಕ್ಷರಾದ ದಿನೇಶ್ ಕುಂಪಲ, ದಾಮೋದರ ಪಡ್ಪು, ಮಹಿಳಾ ಸಮಿತಿ ಪ್ರಧಾನ ಸಂಚಾಲಕಿ ಮಾಧವಿ ಉಳ್ಳಾಲ್, ಭಾರತೀಯ ತೀಯಾ ಸಮಾಜ ಉಳ್ಳಾಲ ವಲಯಾಧ್ಯಕ್ಷ ಜಯಂತ್ ಕೊಂಡಾಣ, ಯುವ ವೇದಿಕೆ ಪ್ರಧಾನ ಸಂಚಾಲಕ ಕೇಶವ ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ಮಂಜಪ್ಪ ಕಾರ್ನವರ್ ಮಾತನಾಡಿದರು. ಶ್ರೀ ಕ್ಷೇತ್ರ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಖೇಶ್ ಮಂಜನಾಡಿ ವಂದಿಸಿದರು. ಡಾ.ಅರುಣ್ ಉಳ್ಳಾಲ್ ನಿರೂಪಿಸಿದರು.