ಉಡುಪಿಯ ಶಾರದಾ ವಸತಿ ಶಾಲೆಯಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು. ವಿದ್ಯಾವಂತ ಆಚಾರ್ಯ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದದವರು ಇದ್ದರು.
* ಶಾಲಾ ನಿರ್ದೇಶಕ ವಿದ್ಯಾವಂತ ಆಚಾರ್ಯ ಅಭಿಮತ
* ಶಾರದಾ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಉಡುಪಿ: ಶಿಕ್ಷಕರಲ್ಲಿ ವಿದ್ಯಾರ್ಥಿಗಳ ಜೀವನವನ್ನೇ ಬದಲಾಯಿಸಬಲ್ಲ ಸಾಮರ್ಥ್ಯ, ಜ್ಞಾನ ಇರುತ್ತದೆ. ನಮ್ಮ ಬದುಕಿನಲ್ಲಿ ನಾವು ಏನಾಗಿದ್ದೇವೆಯೋ ಅದರಲ್ಲಿ ಶಿಕ್ಷಕರ ಮಾರ್ಗದರ್ಶನದ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಅಂಧಕಾರದ ಭವಿಷ್ಯಕ್ಕೆ ಜ್ಞಾನದ ಬೆಳಕು ತೋರುವವರು ಗುರುಗಳಾಗಿದ್ದಾರೆ. ಜ್ಞಾನಕ್ಕೆ ಸಮಾನ ಯಾವುದೂ ಇಲ್ಲ ಎಂದು ಶಾರದಾ ವಸತಿ ಶಾಲೆಯ ನಿರ್ದೇಶಕ ವಿದ್ಯಾವಂತ ಆಚಾರ್ಯ ಹೇಳಿದರು.
ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಶಾರದಾ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಾದ ರಿದಾಂತ್ ಮತ್ತು ರಚನಾ ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಪಾವನಾ ಗಂಗಾ ಕಿವಿಮಾತು ಹೇಳಿದರು. ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ವೈಷ್ಣವಿ ಸ್ವಾಗತಿಸಿದಳು. ಅನುಷ್ಕಾ ವಿ. ತಲ್ವಾರ್ ಕಾರ್ಯಕ್ರಮ ನಿರೂಪಿಸಿದರು. ತನುಶ್ರೀ ಸಾಗರ್ ವಂದಿಸಿದರು. ವೀಣಾ ಪಾಲನ್ ಮತ್ತು ಇಂದು ಕಾರ್ಯಕ್ರಮ ಸಂಘಟಿಸಿದರು.