‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಕಾರ್ಯದರ್ಶಿ ಡಾ.ನಾರಾಯಣ ಸಭಾಹಿತ್ ಮಾತನಾಡಿದರು. ಪ್ರಮುಖರಾದ ಡಾ.ಕೆ.ಶ್ರೀಧರ ರಂಗನಾಥ ಪೈ, ನಾಗೇಶ್ ಪೈ, ಪ್ರಕಾಶ್ ಟಿ.ಸೋನ್ಸ್, ಯು.ಎಸ್.ಶೆಣೈ, ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.
ಕುಂದಾಪುರ: ಶಿಕ್ಷಕರು ಆಧುನಿಕ ಶಿಕ್ಷಣ ವ್ಯವಸ್ಥೆ ಅರಿತು ಅದಕ್ಕೆ ಪೂರಕವಾಗಿ ತಮ್ಮ ಶೈಕ್ಷಣಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಸಂಶೋಧನಾ ಪ್ರವೃತ್ತಿಯ ಜತೆಗೆ, ವಿಮರ್ಶಾತ್ಮಕ ಬರಹಗಳನ್ನು ಗುಣಮಟ್ಟದ ಜರ್ನಲ್‌ಗಳಲ್ಲಿ ಪ್ರಕಟಿಸಬೇಕು. ಸಂಸ್ಥೆಗೆ ವಿದ್ಯಾರ್ಥಿಗಳ ದಾಖಲಾತಿಯಾಗುವಲ್ಲಿ ಶಿಕ್ಷಕರ ಪಾತ್ರವಿದೆ. ಉತ್ತಮ ಶೈಕ್ಷಣಿಕ ಮತ್ತು ಜ್ಞಾನ ಪಡೆಯುವ ವಾತಾವರಣವನ್ನು ಶಿಕ್ಷಕರು ಸೃಷ್ಟಿಸಬೇಕು. ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ಡಾ.ನಾರಾಯಣ ಸಭಾಹಿತ್ ಹೇಳಿದರು.
ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ವತಿಯಿಂದ ಮಂಗಳವಾರ ಆಯೋಜಿಸಲಾದ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಉದ್ಘಾಟಿಸಿ ಮಾತನಾಡಿದರು.
ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ.ಕೆ.ಶ್ರೀಧರ ರಂಗನಾಥ ಪೈ, ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಶಿಕ್ಷಣಾಧಿಕಾರಿ ನಾಗೇಶ್ ಪೈ, ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಟಿ.ಸೋನ್ಸ್, ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಕೆ.ಶಾಂತಾರಾಮ ಪ್ರಭು ಅತಿಥಿಗಳನ್ನು ಗೌರವಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಸರೋಜ ಎಂ. ವಂದಿಸಿದರು. ಕಂಪ್ಯೂಟರ್ ಉಪನ್ಯಾಸಕಿ ವಿಜಯಲಕ್ಷ್ಮೀ ಶೆಟ್ಟಿ ನಿರೂಪಿಸಿದರು.