ಕೆ.ಅಮರನಾಥ ಶೆಟ್ಟಿ ವೃತ್ತದ ಬಳಿ ಕೆಎಸ್ಸಾರ್ಟಿಸಿಯ ಬಸ್‌ಗಳ ತಾತ್ಕಾಲಿಕ ತಂಗುದಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಲಾಯಿತು. ರಾಜೇಶ್ ಶೆಟ್ಟಿ, ಇಂದು ಎಂ., ಅರುಣ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು. 
ಉಡುಪಿ

ಕೆಎಸ್ಸಾರ್ಟಿಸಿ ಬಸ್‌ಗಳಿಗೆ ತಾತ್ಕಾಲಿಕ ತಂಗುದಾಣ

ಇಂದಿರಾ ಎನ್ ಕೆ
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಿಗೆ ತಾತ್ಕಾಲಿಕ ತಂಗುದಾಣ ಕಲ್ಪಿಸುವ ನಿಟ್ಟಿನಲ್ಲಿ ಪುರಸಭೆ, ಕೆಎಸ್ಸಾರ್ಟಿಸಿ ವಿಭಾಗದ ಅಧಿಕಾರಿಗಳು, ಕೆ.ಅಮರನಾಥ ಶೆಟ್ಟಿ ವೃತ್ತದ ಬಳಿ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.
ಕೆಎಸ್ಸಾರ್ಟಿಸಿಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಮಾತನಾಡಿ, ಮೂಡುಬಿದಿರೆಯಲ್ಲಿ ಜನಸಂದಣಿ, ವಾಹನ ದಟ್ಟಣೆ ಹೆಚ್ಚಿದ್ದು, 1968ರಿಂದಲೂ ಖಾಸಗಿ ಬಸ್‌ಗಳೇ ಸಂಚಾರ ನಡೆಸುತ್ತಿವೆ. ಪ್ರಸ್ತುತ ನಾಲ್ಕು ಕೆಎಸ್ಸಾರ್ಟಿಸಿ ಬಸ್‌ಗಳು ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಶೀಘ್ರದಲ್ಲೇ ಇನ್ನೂ ನಾಲ್ಕು ಬಸ್‌ಗಳು ಸೇರ್ಪಡೆಯಾಗಲಿವೆ. ಇದರಿಂದ ಉಂಟಾಗುವ ತೊಂದರೆ ತಪ್ಪಿಸಲು ಪುರಸಭೆಯ ಮನವಿಯಂತೆ ತಾತ್ಕಾಲಿಕ ನಿಲುಗಡೆ ವ್ಯವಸ್ಥೆ ಮಾಡಲಾಗುವುದು ಎಂದು ರಾಜೇಶ್ ಶೆಟ್ಟಿ ಹೇಳಿದರು.
ಸ್ಥಳ ಪರಿಶೀಲನೆ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಭಾರತೀಯ ರೈತ ಸೇನೆ ಜಿಲ್ಲಾ ಅಧ್ಯಕ್ಷ ಹರಿಪ್ರಸಾದ್ ನಾಯಕ್, ಕಾರ್ಯದರ್ಶಿ ಶಿವರಾಮ್ ಜೆ.ಶೆಟ್ಟಿ, ಕೆಎಸ್ಸಾರ್ಟಿಸಿ ಸಹಾಯಕ ಇಂಜಿನಿಯರ್ ಹರೀಶ್, ಶಿವಾನಂದ ಪಾಂಡ್ರು ಉಪಸ್ಥಿತರಿದ್ದರು.

ಶಾಶ್ವತ ಕೆಎಸ್ಸಾರ್ಟಿಸಿ ಬಸ್ ತಂಗುದಾಣ ನಿರ್ಮಾಣವಾಗುವವರೆಗೆ ಖಾಸಗಿ ವಾಹನಗಳ ಪಾರ್ಕಿಂಗ್‌ಗೆ ಮೀಸಲಾದ ಅರ್ಧ ಜಾಗದಲ್ಲಿ ತಾತ್ಕಾಲಿಕವಾಗಿ ಬಸ್‌ಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು.

— ಇಂದು ಎಂ., ಪುರಸಭೆ ಮುಖ್ಯಾಧಿಕಾರಿ