ಶಿರೂರು ಮೇಲ್ಪಂಕ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನಾ ಆಚಾರ್ಯ ಉದ್ಘಾಟಿಸಿದರು.  
ಉಡುಪಿ

ಅವಕಾಶ ಸದ್ಬಳಕೆಯಾದಾಗ ಅತ್ಯುತ್ತಮ ಶೈಕ್ಷಣಿಕ ವಾತಾವರಣ

ಬೈಂದೂರು: ಪ್ರತಿಯೊಂದು ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಬೇಕಾದರೆ ಅಲ್ಲಿರುವ ಶಿಕ್ಷಕರ ಇಚ್ಛಾಶಕ್ತಿ, ಶಾಲಾಭಿವೃದ್ಧಿ ಸಮಿತಿಯ ಜವಾಬ್ದಾರಿ, ಪಾಲಕರ ಪ್ರೋತ್ಸಾಹ ಹಾಗೂ ಸಮುದಾಯದ ಸಹಭಾಗಿತ್ವ ಅತೀ ಅಗತ್ಯ. ಗ್ರಾಮೀಣ ಭಾಗದಲ್ಲಿ ದೊರೆಯುವ ಅವಕಾಶಗಳನ್ನು ಪೂರಕವಾಗಿ ಉಪಯೋಗಿಸಿಕೊಂಡಾಗ ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಬಹುದಾಗಿದೆ ಎಂದು ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು.
ಶಿರೂರು ಮೇಲ್ಪಂಕ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಲರವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ.ನಾಯಕ್ ಧ್ವಜಾರೋಹಣ ನೆರವೇರಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಜ್ಯೋತಿ ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ, ತಾಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಗ್ರಾಪಂ ಉಪಾಧ್ಯಕ್ಷ ಕಾಪ್ಸಿ ನೂರ್ ಮಹಮ್ಮದ್, ಸದಸ್ಯ ಶಕೀಲ್, ಗ್ರಾಪಂ ಮಾಜಿ ಉಪಾಧ್ಯಕ್ಷ ರವೀಂದ್ರ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಿರೂರು ಪ್ರಸಾದ ಪ್ರಭು, ಕಾರ್ಯದರ್ಶಿ ನಯನ ಶೆಟ್ಟಿ, ಹಿರಿಯ ನಾಗರಿಕ ಸಂಘ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಸಿಆರ್‌ಪಿ ಸಿ. ಎನ್.ಬಿಲ್ಲವ, ರವೀಂದ್ರ ಶೆಟ್ಟಿ ಹೊನಕೆರೆ, ಜೆಸಿಐ ಉಪ್ಪುಂದ ಸುಪ್ರೀಂ ಅಧ್ಯಕ್ಷ ರವಿರಾಜ್ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಜ್ಞಾನವಿಕಾಸ ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ, ಶಿಕ್ಷಕಿ ಯಶೋದಾ, ವಿನೋದ್ ಪೂಜಾರಿ, ರೋನಿ ದೇವಾಡಿಗ, ವಿಸ್ಮಯ ಶೆಟ್ಟಿ, ಪ್ರಜ್ವಲ್ ಇದ್ದರು.
ಪ್ರಭಾರ ಮುಖ್ಯಶಿಕ್ಷಕಿ ಸರಸ್ವತಿ ಎನ್.ವರದಿ ಮಂಡಿಸಿದರು. ಸಹಶಿಕ್ಷಕಿ ವಿದ್ಯಾ ಸ್ವಾಗತಿಸಿದರು. ಅನಿತಾ ಪೂಜಾರಿ ವಂದಿಸಿದರು.