ಮೂಡುಬಿದಿರೆ ಕೀರ್ತಿನಗರದಲ್ಲಿ ನಡೆದ ಉಚಿತ ಶ್ರವಣ ತಪಾಸಣೆ ಕಾರ್ಯಕ್ರಮದಲ್ಲಿ ಈಶ್ವರ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಡಾ.ಮಂದಾರ ರಾಜೇಶ್ ಭಟ್, ಶ್ರೀನಿವಾಸ್ ನಾಯಕ್ ಇಂದಾಜೆ, ಉಮೇಶ್ ರಾವ್ ಕೆ., ಉದಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು. 
ಉಡುಪಿ

ಪಂಚೇಂದ್ರಿಯಗಳಲ್ಲಿ ಕಿವಿ ಮುಖ್ಯ ಅಂಗ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಮಾನವನ ಪಂಚೇಂದ್ರಿಯಗಳಲ್ಲಿ ಕಿವಿ ಮುಖ್ಯವಾದ ಅಂಗ. ಕಿವಿ ಕೇಳಿಸದ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಇಂತಹ ಶಿಬಿರ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಮುಳುಗು ತಜ್ಞ ಈಶ್ವರ ಮಲ್ಪೆ ಹೇಳಿದರು.
ವಿವಿಧ ಸಂಘ-ಸಂಸ್ಥೆಗಳು, ಟೀಂ ಈಶ್ವರ ಮಲ್ಪೆ ಸಹಯೋಗದೊಂದಿಗೆ ಕೊಡಂಗಲ್ಲು ಸಮೀಪದ ಕೀರ್ತಿನಗರದ ರೋಟರಿ ಟೆಂಪಲ್ ಟೌನ್ ಆಡಿಟೋರಿಯಂನಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಶ್ವರ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ವಿಕಾಸ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ರಾಜ್ಯ ಉಪಾಧ್ಯಕ್ಷ ಡಾ.ಮಂದಾರ ರಾಜೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಅಸಿಸ್ಟೆಂಟ್ ಗವರ್ನರ್ ಉಮೇಶ್ ರಾವ್ ಕೆ., ಕೀರ್ತಿನಗರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯಕುಮಾರ್, ಶ್ರವಣ ತಜ್ಞೆ ಡಾ.ಅಂಕಿತಾ ಕಲ್ಮಾಡಿ ಭಾಗವಹಿಸಿದ್ದರು. ಟೀಂ ಈಶ್ವರ ಮಲ್ಪೆ ಸಂಚಾಲಕ ಲವ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವರ್ಷ ಕ್ರಿಯೇಷನ್ಸ್ ಸಿ.ಇ.ಒ ಹರೀಶ್ ಕೆ.ಆದೂರು ಸ್ವಾಗತಿಸಿದರು. ಸೌಮ್ಯಾ ಕುಗ್ವೆ ನಿರೂಪಿಸಿದರು. ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಹರೀಶ್ ಎಂ.ಕೆ. ವಂದಿಸಿದರು. ಯಶ ಕರ್ನಾಟಕ ವಾರಪತ್ರಿಕೆ, ವಿಕಾಸ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್, ಕೀರ್ತಿನಗರ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಶಿಬಿರ ನಡೆಯಿತು.