judgement 
ಉಡುಪಿ

ಕಿರುಕುಳ ನೀಡಿದವನಿಗೆ 40 ವರ್ಷ ಸಜೆ

ಕಾಸರಗೋಡು: ಪೋಕ್ಸೋ ಪ್ರಕರಣದ ಅಪರಾಧಿಗೆ ನ್ಯಾಯಾಲಯ ವಿವಿಧ ಸೆಕ್ಷನ್‌ಗಳಲ್ಲಿ ಒಟ್ಟು 40 ವರ್ಷ ಕಠಿಣ ಸಜೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಹೊಸದುರ್ಗ ಮಾಲೋಂ ಅದಿರುಮಾವು ಪಾಪ್ಪಿನಿ ವೀಟಿಲ್‌ನ ಪಿ.ಡಿ.ಸನೀಶ್(33) ಎಂಬಾತನಿಗೆ ಹೊಸದುರ್ಗ ಫಾಸ್ಟ್ ಟ್ರಾೃಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ.ಸುರೇಶ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ದಂಡ ಪಾವತಿಸದಿದ್ದರೆ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಚಿತ್ತಾರಿಕ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ 7ರ ಹರೆಯದ ಬಾಲಕಿಗೆ 2023ರಿಂದ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಚಿತ್ತಾರಿಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನ ಇನ್‌ಸ್ಪೆಕ್ಟರ್ ರಂಜಿತ್ ರವೀಂದ್ರನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.