ಚಿತ್ತೂರು ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡವನ್ನು ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ಪ್ರಮುಖರಾದ ಎಂ.ಕೃಷ್ಣಮೂರ್ತಿ ಮಂಜರು, ಕೆ.ಗೋಪಾಲ ಪೂಜಾರಿ, ಅಶೋಕ್ ಕಾಮತ್, ವಂಡಬಳ್ಳಿ ಜಯರಾಮ ಶೆಟ್ಟಿ, ಎಂ.ಅಬ್ದುಲ್ ಸಲಾಂ, ಡಾ.ರಾಜೇಶ್ ಬಾಯರಿ ಇದ್ದರು.  
ಉಡುಪಿ

ದುಡಿದ ಹಣದಲ್ಲಿ ಶಿಕ್ಷಣಕ್ಕೆ ಮಹತ್ವ ಮಾದರಿ

ಕುಂದಾಪುರ: ಬದುಕಿನಲ್ಲಿ ಎಷ್ಟು ಕೂಡ ದುಡಿಯಬಹುದು. ಆದರೆ ದುಡಿದ ಹಣದಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಿ, ದೇವಸ್ಥಾನಗಳಿಗೆ ನೀಡಿದಷ್ಟೇ ಬೆಲೆಯನ್ನು ವಿದ್ಯಾಸಂಸ್ಥೆಗಳಿಗೂ ನೀಡುತ್ತಾ ಬದುಕಿದ ಕೃಷ್ಣಮೂರ್ತಿ ಮಂಜರು ಎಲ್ಲರಿಗೂ ಪ್ರೇರಣೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಚಿತ್ತೂರು ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಗೆ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸಮರ್ಪಿಸಲಾದ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಎಂ.ಕೃಷ್ಣಮೂರ್ತಿ ಮಂಜರು ಮಾತನಾಡಿದರು. ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಕಲಿಕಾ ಪರಿಕರ ವಿತರಿಸಲಾಯಿತು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ತೆಂಕೂರು ವನ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ವಂಡಬಳ್ಳಿ ಜಯರಾಮ ಶೆಟ್ಟಿ, ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾಧ್ಯಕ್ಷ ಎಂ.ಅಬ್ದುಲ್ ಸಲಾಂ, ಚಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಡಾ.ರಾಜೇಶ್ ಬಾಯರಿ, ಶಾಲೆಯ ಹಿರಿಯ ಮುಖ್ಯಶಿಕ್ಷಕ ಜಟ್ಟಪ್ಪ ಬಿ., ಶ್ರೀ ಕ್ಷೇತ್ರ ಕೊಲ್ಲೂರಿನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಚಿತ್ತೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸದಾನಂದ ಶೆಟ್ಟಿ, ವಂಡ್ಸೆ ನಿರಾಮಯ ಸೊಸೈಟಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಚಿತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ದಿವಾಕರ ಆಚಾರ್ಯ, ರಘುರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಒಂದು ಊರಿನಲ್ಲಿ ದೇವಸ್ಥಾನ ಹಾಗೂ ಶಾಲೆ ಉದ್ಧಾರವಾದರೆ ಊರೇ ಉದ್ಧಾರವಾದಂತೆ. ಶಾಲೆಯವರು ನಾವು ಒದಗಿಸಿದ ಸೌಲಭ್ಯ ಉಪಯೋಗಿಸಿ ಮಾದರಿ ಶಾಲೆಯನ್ನಾಗಿ ಮಾರ್ಪಡಿಸಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕದ ವಿಷಯಗಳು ಮಾತ್ರವಲ್ಲದೆ ಜೀವನ ಸಾಗಿಸುವ ಕಲೆಯೂ ಕರಗತವಾಗಿರುತ್ತದೆ. ಎಲ್ಲ ಗ್ರಾಮದ ಸರ್ಕಾರಿ ಶಾಲೆಗಳನ್ನು ಗ್ರಾಮದ ನಾಲ್ಕು ಮಂದಿ ಸೇರಿಯಾದರೂ ದತ್ತು ತೆಗೆದುಕೊಂಡು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ.

— ಎಂ.ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೆಬಲ್ ಟ್ರಸ್ಟ್ ಪ್ರವರ್ತಕ