ಇನ್‌ಸ್ಟಿಟ್ಯೂಷನ್ ಆಫ್ ಲೆಗೆಸಿ ಕಾಫಿ ಟೇಬಲ್ ಪುಸ್ತಕವನ್ನು ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು. ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಡಾ.ಸತೀಶ್ಚಂದ್ರ ಇತರರಿದ್ದರು. 
ಉಡುಪಿ

ಶೈಕ್ಷಣಿಕ ಕ್ಷೇತ್ರದಲ್ಲಿ ಸಂಸ್ಥೆ ರಾಜ್ಯಕ್ಕೆ ಮಾದರಿ

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಶ್ರೀ ರತ್ನವರ್ಮ ಹೆಗ್ಗಡೆ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಆರಂಭವಾದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಐದು ದಶಕಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗಳ ಮಾಡುವ ಮೂಲಕ ರಾಜ್ಯದಲ್ಲಿ ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಗುರುತಿಸಿಕೊಂಡಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಯ ವತಿಯಿಂದ ಪ್ರಕಟಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್‌ಡಿಎಂ ಸಂಸ್ಥೆಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪಯಣ ದಾಖಲಿಸುವ ಇನ್‌ಸ್ಟಿಟ್ಯೂಷನ್ ಆಫ್ ಲೆಗೆಸಿ ಕಾಫಿ ಟೇಬಲ್ ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಹೇಮಾವತಿ ವಿ.ಹೆಗ್ಗಡೆ ಮಾತನಾಡಿ, ಪುಸ್ತಕವು ಅತ್ಯಂತ ಆಕರ್ಷಕವಾಗಿ ಮೂಡಿಬಂದಿದ್ದು, ಅದರ ಸಂಪಾದಕೀಯ ಹಾಗೂ ನಿರ್ಮಾಣ ತಂಡದ ಪರಿಶ್ರಮ ಶ್ಲಾಘನೀಯ ಎಂದು ಮೆಚ್ಚುಗೆ ಸೂಚಿಸಿದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಮಾತನಾಡಿದರು. ಇನ್‌ಸ್ಟಿಟ್ಯೂಷನ್ ಆಫ್ ಲೆಗೆಸಿ ಪುಸ್ತಕದಲ್ಲಿ ಧರ್ಮಸ್ಥಳದ ಅಭಿವೃದ್ಧಿ, ಸಾಮಾಜಿಕ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳು, ಶಿಕ್ಷಣ ಕ್ಷೇತ್ರದ ಸಾಧನೆಗಳ ಸಮಗ್ರ ಚಿತ್ರಣ ದಾಖಲಿಸಲಾಗಿದೆ. ಜತೆಗೆ ಎಸ್‌ಕೆಡಿಆರ್‌ಡಿಪಿ, ಸಿರಿ, ರುಡ್‌ಸೆಟ್, ಎಸ್‌ಡಿಎಂ ಧರ್ಮೋತ್ಥಾನ ಟ್ರಸ್ಟ್ ಸಹಿತ ವಿವಿಧ ಸಂಸ್ಥೆಗಳ ಕಾರ್ಯಚಟುವಟಿಕೆಗಳು, ಸಾಧನೆಗಳು ಮತ್ತು ಇತಿಹಾಸವನ್ನು ಒಳಗೊಂಡಿದೆ.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹಷೇರ್ಂದ್ರಕುಮಾರ್, ಸುಪ್ರಿಯಾ ಹಷೇರ್ಂದ್ರ ಕುಮಾರ್, ಪ್ರಾಂಶುಪಾಲರಾದ ಡಾ.ವಿಶ್ವನಾಥ್, ಡಾ.ಅಶೋಕ್ ಕುಮಾರ್, ಧನ್ಯಕುಮಾರ್, ಪ್ರಶಾಂತ್ ಬಿ.ಆರ್., ಅರವಿಂದ್ ಹಾಗೂ ಅಕಾಡೆಮಿಕ್ ಇನ್‌ಸೈಟ್ಸ್ ತಂಡದ ಪ್ರತಿನಿಧಿಗಳಾದ ಮೊನಿಶಾ ರಾಕೇಶ್, ಮೊಯಿನ್, ಅಗಸ್ಟಿನ್ ಎಸ್.ನಿಯೋಲ್ ಮತ್ತು ಮಧು ಉಪಸ್ಥಿತರಿದ್ದರು.

ಕಾಫಿ ಟೇಬಲ್ ಪುಸ್ತಕವು ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಕಾರ್ಯಕ್ಷೇತ್ರಗಳನ್ನು ಸಂಕ್ಷಿಪ್ತವಾಗಿ ಹಾಗೂ ಮನೋಜ್ಞ ಛಾಯಾಚಿತ್ರಗಳ ಮೂಲಕ ಪರಿಚಯಿಸುತ್ತದೆ. ಚತುರ್ದಾನ ಪರಂಪರೆಯಿಂದ ಆರಂಭಗೊಂಡು ವಿದ್ಯಾದಾನದ ಮಹತ್ವ ಸಾರುವ ಶಿಕ್ಷಣ ಸಂಸ್ಥೆಗಳ ಸಮಗ್ರ ಮಾಹಿತಿಯನ್ನು ಈ ಕೃತಿ ಒಳಗೊಂಡಿದೆ.

— ಡಾ.ಸತೀಶ್ಚಂದ್ರ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ