ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿದರು. ಸಮಿತಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಕಾಂಗ್ರೆಸ್ ನಾಯಕಿ ಶಾಂತಲಾ ಗಟ್ಟಿ, ರಾಜ್‌ಕುಮಾರ್ ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ಪೃಥ್ವಿರಾಜ್ ಆರ್.ಕೆ., ಗಿರೀಶ್ ಆಳ್ವ, ಗಣೇಶ್ ಗಂಜಿಮಠ ಮೊದಲಾದವರಿದ್ದರು. 
ಉಡುಪಿ

ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದೆ

ವಿಜಯವಾಣಿ ಸುದ್ದಿಜಾಲ ಗುರುಪುರ
ಮುಂಬರುವ ಜಿಪಂ, ತಾಪಂ, ಗ್ರಾಪಂ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದೆ. ಮುಖ್ಯಮಂತ್ರಿ ಡಿಕೆಶಿ ಇದೇ ಪ್ರಥಮ ಬಾರಿ ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲು ಉದ್ದೇಶಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.
ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪದಗ್ರಹಣ, ಪಕ್ಷ ಸೇರ್ಪಡೆ, ಎಸ್‌ಐಆರ್, ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್(ಬಿಎಲ್‌ಪಿ) ಅಧ್ಯಕ್ಷತೆಯಲ್ಲಿ ಗುರುವಾರ ಗುರುಪುರ-ಪೊಳಲಿ ದ್ವಾರದ ಬಳಿ ಇರುವ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಮಾತನಾಡಿದರು.
ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್ ಆಸ್ತಿ. ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಕಾರ್ಯಕರ್ತರು ಬೆಂಗಳೂರಿಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ. ಎಸ್‌ಐಆರ್ ವಿಷಯದಲ್ಲಿ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಬೇಕು ಎಂದರು.
ಕಾಂಗ್ರೆಸ್ ನಾಯಕಿ ಶಾಂತಲಾ ಗಟ್ಟಿ, ರಾಜ್‌ಕುಮಾರ್ ಶೆಟ್ಟಿ ಎಸ್‌ಐಆರ್ ವಿಷಯದಲ್ಲಿ ಮಾತನಾಡಿದರು. ಕಾಂಗ್ರೆಸ್ ಪ್ರಮುಖರಾದ ಪೃಥ್ವಿರಾಜ್ ಆರ್.ಕೆ., ಗಿರೀಶ್ ಆಳ್ವ, ಗಣೇಶ್ ಗಂಜಿಮಠ, ಜಯಲಕ್ಷ್ಮೀ, ನೂರ್ ಅಹ್ಮದ್, ಬಾಷಾ ಗುರುಪುರ, ಕೃಷ್ಣ ಅಮೀನ್, ಸ್ವರೂಪ್ ರೈ, ಸಮಿತಿ ಪದಾಧಿಕಾರಿಗಳು, ಪಕ್ಷ ಪ್ರಮುಖರು, ಬಿಎಲ್‌ಎಗಳು, ಗ್ರಾಪಂ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ತಾಪಂ ಮಾಜಿ ಸದಸ್ಯ ಸುನೀಲ್ ಗಂಜಿಮಠ ನಿರೂಪಿಸಿದರು.