ಕಂಬಳ ಓಟದ ತರಬೇತಿ ಶಿಬಿರ ಉದ್ಘಾಟಿಸಿ ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿದರು. ಪ್ರಮುಖರಾದ ಎರ್ಮಾಳ್ ರೋಹಿತ್ ಕುಮಾರ್ ಹೆಗ್ಡೆ, ಪ್ರವೀಣ್‌ಚಂದ್ರ ಆಳ್ವ, ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.  
ಉಡುಪಿ

ಮುಂದಿನ ಪೀಳಿಗೆಗೆ ಕಂಬಳ ಉಳಿಸಿ ಬೆಳೆಸುವ ಜವಾಬ್ದಾರಿ

ಕಾರ್ಕಳ: ಕಂಬಳ ಕ್ರೀಡೆ ದಿನದಿಂದ ದಿನಕ್ಕೆ ಹೆಚ್ಚು ಜನಪ್ರಿಯತೆ ಪಡೆಯುತ್ತಿದ್ದು, ಇದನ್ನು ಮುಂದಿನ ಪಿಳಿಗೆಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಂಬಳ ಓಟಗಾರರ ಸಂಖ್ಯೆಯೂ ಹೆಚ್ಚಾಗಬೇಕು. ಕಂಬಳದಲ್ಲಿ ಕೋಣಗಳು ಮತ್ತು ಯಜಮಾನರ ಸಂಖ್ಯೆ ಹೆಚ್ಚಾಗುತ್ತಿರುವಂತೆ, ಓಟಗಾರರ ತರಬೇತಿಗಾಗಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ಕಾರ್ಕಳದ ಮಿಯ್ಯರು ಲವ-ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಆಶ್ರಯದಲ್ಲಿ ಆಯೋಜಿಸಲಾದ ಪ್ರಥಮ ವರ್ಷದ ಕಂಬಳ ಓಟದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಬಿರದಲ್ಲಿ ಒಟ್ಟು 214 ಕಂಬಳ ಓಟದ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕಂಬಳ ಓಟ ತರಬೇತಿ ಶಿಬಿರದ ಸಂರಕ್ಷಕರಾದ ಎರ್ಮಾಳ್ ರೋಹಿತ್ ಕುಮಾರ್ ಹೆಗ್ಡೆ, ಪ್ರವೀಣ್‌ಚಂದ್ರ ಆಳ್ವ, ಯೋಗೀಶ್ ಶೆಟ್ಟಿ, ಸಂದೀಪ್ ಶೆಟ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು ಟ್ರಸ್ಟಿ ಸುನೀಲ್ ಕುಮಾರ್ ಬಜಗೋಳಿ, ಕುಕ್ಕುಂದೂರು ಪಂಚಾಯಿತಿ ಮಾಜಿ ಅಧ್ಯಕ್ಷ ಅಂಥೋನಿ ಡಿಸೋಜ ನಕ್ರೆ, ರಾಜ್ಯ ಕಂಬಳ ಸಮಿತಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಪ್ರಮುಖರಾದ ಶೈಲೇಶ್ ಅರಿಗ ಹಿನಪ್ಪಾಡಿ, ದಿವಾಕರ್ ಜೈನ್, ಕಿರಣ್ ಬಲಿಪ, ವಿಶ್ವನಾಥ್ ಶೆಟ್ಟಿ, ಚಂದ್ರಹಾಸ ಸಾಧು ಸನಿಲ್, ಮಿಯ್ಯರು ಮಹಾಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ತಾರಾನಾಥ್ ಕೋಟ್ಯಾನ್, ತರಬೇತುದಾರ ಶಾಂತರಾಮ್, ವಸಂತ್ ಜೋಗಿ, ಅಶೋಕ್ ಕುಮಾರ್ ಜೈನ್ ಈದು, ದಿನೇಶ್ ಕಕ್ಕೆಪದವು, ವಿದ್ಯಾದರ್ ಮತ್ತಿತರರು ಉಪಸ್ಥಿತರಿದ್ದರು.