ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಚಿಣ್ಣರ ಕಲರವ ಕಾರ್ಯಕ್ರಮ ನಡೆಯಿತು.
ಕುಂದಾಪುರ: ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಚಿಣ್ಣರ ಕಲರವ ಕಾರ್ಯಕ್ರಮ ಸೋಮವಾರ ನಡೆಯಿತು.
ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗೇಶ್ ಶೇರುಗಾರ್, ಗಂಗೊಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರಿಗಾಗಿ ಆಯೋಜಿಸಿದ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುವಾನ ವಿತರಿಸಲಾಯಿತು.
ಬಿಆರ್‌ಪಿ ಸಂತೋಷ್ ಕುವಾರ್ ಶೆಟ್ಟಿ, ಇಸಿಒ ನಾರಾಯಣ್ ಮರಾಠಿ, ಸಿಆರ್‌ಪಿ ಮಹೇಶ್, ಮಂಜುನಾಥ ಪಾಳ್ ಶುಭ ಹಾರೈಸಿದರು. ಗ್ರಾಪಂ ಸದಸ್ಯರಾದ ಸುರೇಖಾ ಕಾನೋಜಿ, ರಿಯಾಜ್ ಅಹಮದ್, ಶ್ರೀನಾಥ್ ಪಿ.ಖಾರ್ವಿ, ಹೋಳಿ ಉತ್ಸವ ಸಮಿತಿ ಉಪಾಧ್ಯಕ್ಷ ಮಡಿ ರಾವೇಂದ್ರ ಖಾರ್ವಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಾಗರತ್ನ, ಎಸ್‌ಡಿಎಂಸಿ ಸದಸ್ಯರು, ಶಾಲಾ ನಾಯಕ ಶ್ರೀಶನ್, ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿಶಂಕರ್ ಖಾರ್ವಿ ಸ್ವಾಗತಿಸಿದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಉಷಾ ಪ್ರಾಸ್ತಾವಿಕ ವಾತುಗಳನ್ನಾಡಿದರು. ಸಹ ಶಿಕ್ಷಕಿಯರಾದ ಅನುಷಾ ಸಿ. ಬಂಗೇರಾ ಕಾರ್ಯಕ್ರಮ ನಿರೂಪಿಸಿದರು. ಆಶಾಲತಾ ವಂದಿಸಿದರು.