ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಾತನಾಡಿದರು. ಕೆ.ಜಯಂತ್, ಕೆ.ಹರೀಶ್ ಕುಮಾರ್, ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.  
ಉಡುಪಿ

ತಳಮಟ್ಟದ ಕಾರ್ಯಕರ ಶ್ರಮವೇ ಪಕ್ಷದ ಬಲ

ಬೆಳ್ತಂಗಡಿ: ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯ, ಸಲಹೆ ಹಾಗೂ ಅನುಭವಗಳನ್ನು ಆಧರಿಸಿ ಪಕ್ಷ ಸಂಟನೆಯ ಮುಂದಿನ ರೂಪುರೇಷೆಗಳನ್ನು ರೂಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್ ಕೇವಲ ಚುನಾವಣೆ ಸಂದರ್ಭದಲ್ಲಿ ಸಕ್ರಿಯವಾಗಿರದೆ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಜನಪರ ಪಕ್ಷವಾಗಿದೆ. ಗ್ರಾಮ, ಬೂತ್ ಹಾಗೂ ಬ್ಲಾಕ್‌ಮಟ್ಟದಿಂದ ಪಕ್ಷ ಸಂಟನೆ ಮಾಡಬೇಕು. ಈ ನಿಟ್ಟಿನಲ್ಲಿ ತಳಮಟ್ಟದ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

ಸಂಟನಾ ಸೃಜನ್ ಅಭಿಯಾನದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಅಧ್ಯಕ್ಷರ ಆಯ್ಕೆ ಸೇರಿದಂತೆ ಪಕ್ಷ ಸಂಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ನಾಯಕರ ಆಯ್ಕೆಗೂ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಹಿರಿಯ ನಾಯಕರು, ಜನಪ್ರತಿನಿಧಿಗಳು ಹಾಗೂ ಸಾಮಾನ್ಯ ಕಾರ್ಯಕರ್ತರ ನಡುವೆ ಮುಕ್ತ ಸಮಾಲೋಚನೆ ನಡೆಸುವ ಮೂಲಕ ಸಂಟನೆಯನ್ನು ಪರಿಣಾಮಕಾರಿಯಾಗಿ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದರು.
ಕೇರಳ ಕೋಜಿಕ್ಕೋಡ್ ಉತ್ತರ ಕ್ಷೇತ್ರದ ಶಾಸಕ ಕೆ.ಜಯಂತ್ ಮಾತನಾಡಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಅಭಿಪ್ರಾಯಕ್ಕೂ ಗೌರವವಿದೆ. ಕಾಂಗ್ರೆಸ್‌ನ ನಿಜವಾದ ಶಕ್ತಿ ಕಾರ್ಯಕರ್ತರು. ಅವರೊಂದಿಗೆ ನಿರಂತರ ಸಂವಾದ ನಡೆಸಿ, ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಜನರ ಧ್ವನಿಯಾಗಿ ಪಕ್ಷವನ್ನು ಬಲಪಡಿಸುವುದು ಅಭಿಯಾನದ ಆಶಯ ಎಂದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ, ಗ್ರಾಮೀಣ ಸಮಿತಿ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ, ಕಾರ್ಯಕರ್ತರು ಉಪಸ್ಥಿತರಿದ್ದರು.