ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ವಿವಿಧ ಚಟುವಟಿಕೆಗಳ ಘಟಕಗಳನ್ನು ಡಾ.ಭಾಸ್ಕರ ಶೆಟ್ಟಿ ಉದ್ಘಾಟಿಸಿದರು. ಪ್ರಮುಖರಾದ ಸುರೇಂದ್ರ ಶೆಟ್ಟಿ, ಗಣಪತಿ ವಿ.ನಾಯ್ಕ, ಸುಕೇಶ ಶೆಟ್ಟಿ ಮತ್ತಿತರರಿದ್ದರು.
ಸೇವಾ ಮನೋಭಾವದಿಂದ ಲಭಿಸುವ ಯಶಸ್ಸು ಶಾಶ್ವತವಾಗಿದ್ದು, ಅದಕ್ಕಾಗಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದ್ದು ಅನಿವಾರ್ಯ. ಯಶಸ್ಸನ್ನು ಹುಡುಕಿಕೊಂಡು ಹೋಗಬಾರದು. ಅದಾಗಿಯೇ ನಮ್ಮನ್ನು ಅರಸಿಕೊಂಡು ಬರಬೇಕು ಎಂದು ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಟಕಗಳನ್ನು ಉದ್ಘಾಟಿಸಿ ವಾತನಾಡಿದರು.
ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯಾಧಿಕಾರಿ ಗಣಪತಿ ವಿ.ನಾಯ್ಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಅವರು ಕ್ರೀಡಾ ಚಟುವಟಿಕೆಯ ಸಾಧನೆ ಮತ್ತು ಕ್ರೀಡೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ. ಸ್ವಾಗತಿಸಿದರು. ಯೋಜನಾಧಿಕಾರಿ ಜ್ಯೋತಿ ಎ.ಶೆಟ್ಟಿ ಪ್ರಸ್ತಾವನೆಗೈದರು. ಉಪನ್ಯಾಸಕ ರಾಮ ನಾಯ್ಕ ಕೆ.ಬಿ. ವಂದಿಸಿದರು. ಸುಚಿತಾ ಶೆಟ್ಟಿ ನಿರೂಪಿಸಿದರು.