ಕೋಟದಲ್ಲಿ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿ
ಕೋಟ, ಕೋಟತಟ್ಟು, ಸಾಲಿಗ್ರಾಮ, ಸಾಸ್ತಾನ ಸೇರಿದಂತೆ ವಿವಿಧ ಭಾಗಗಳಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು ಶಾಲಾ ಮಕ್ಕಳ ಸಹಿತ ಸಾರ್ವಜನಿಕರು ಆತಂಕದಲ್ಲೇ ಸಂಚರಿಸುವಂತಾಗಿದೆ. ಇದಕ್ಕೆ ಕಡಿವಾಣ ಹಾಕಬೇಕಾದ ಸ್ಥಳೀಯಾಡಳಿತ ಕಣ್ಮುಚ್ಚಿ ಕುಳಿತ್ತಿದ್ದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಬೀದಿನಾಯಿಗಳ ಹಾವಳಿಯಿಂದಾಗಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳು ಜೀವವನ್ನು ಕೈಯಲ್ಲಿಡಿದು ಸಂಚರಿಸುವಂತಾಗಿದೆ. ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಸಂಬಂಧ ಪಶು ಸಂಗೋಪನಾ ಇಲಾಖೆ ಮುತುವರ್ಜಿ ವಹಿಸಿ ಸಂತಾನಶಕ್ತಿ ಹರಣಕ್ಕೆ ಕ್ರಮ ಕೈಗೊಳ್ಳಬೇಕಿದೆ. ಆದರೆ ಈ ಬಗ್ಗೆ ಸ್ಥಳೀಯಾಡಳಿತ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂಬ ಆರೋಪ ಕೇಳಿಬಂದಿವೆ. ಸ್ಥಳೀಯಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗೆ ಕೂಡಲೇ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
ಮನೆಯಂಗಳಲ್ಲಿರುವ ವಸ್ತುಗಳು ನಾಪತ್ತೆ: ಬೀದಿ ನಾಯಿಗಳು ಮನೆಗಳ ಅಂಗಳಕ್ಕೂ ಲಗ್ಗೆಯಿಡುತ್ತಿದ್ದು ಅನೇಕ ವಸ್ತುಗಳನ್ನು ಹೊತ್ತೊಯ್ಯುತ್ತಿವೆ. ರಾತ್ರಿ ವೇಳೆ ಮನೆ ಅಂಗಳದಲ್ಲಿರುವ ಚಪ್ಪಲಿ, ಬಟ್ಟೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಬೀದಿನಾಯಿಗಳು ಕಚ್ಚಿ ಹಾಳು ಮಾಡುತ್ತಿದ್ದು ಮನೆಯವರು ತೊಂದರೆ ಅನುಭವಿಸುವಂತಾಗಿದೆ.
ಬೀದಿ ನಾಯಿಗಳ ಸಮಸ್ಯೆ ಕುರಿತಂತೆ ಈಗಾಗಲೇ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿದ್ದೇವೆ. ಶ್ವಾನಗಳ ಸಂತಾನಶಕ್ತಿ ಹರಣಕ್ಕೆ ಅನುದಾನ ಕಾಯ್ದಿರಿಸಲಾಗಿದ್ದು, ಶ್ರೀ ಕ್ರಮ ಕೈಗೊಳ್ಳಲಿದ್ದೇವೆ.
ಸಾಲಿಗ್ರಾಮ ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆ ಕ್ರಮಗಳ ಬಗ್ಗೆ ಕುರಿತಂತೆ ಈಗಾಗಲೇ ಒಂದನೇ ಹಂತದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಶ್ರೀದಲ್ಲೇ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು.
ಸಮಸ್ಯೆಗೆ ಕಡಿವಾಣ ಹಾಕುವ ಸಂಬಂಧ ಈಗಾಗಲೇ ಸ್ಥಳೀಯಾಡಳಿತಗಳೊಂದಿಗೆ ಚರ್ಚಿಸಲಾಗಿದೆ. ಸ್ಥಳೀಯಾಡಳಿತಗಳು ಅನುದಾನ ಕಾಯ್ದಿಸಿವೆ. ಆದರೆ ಸಂತಾನಶಕ್ತಿ ಹರಣ ಚಿಕಿತ್ಸಾ ಕ್ರಮಗಳಿಗೆ ಕೆಲವು ವಾರ್ಗಸೂಚಿ ಕ್ರಮ ಕೈಗೊಂಡು, ಸಂಬಂಧಪಟ್ಟ ಸಂಸ್ಥೆಯ ಮೂಲಕ ಅನುಷ್ಠಾನ ಮಾಡಲಾಗುವುದು.