ಬೈಕ್ ಆ್ಯಕ್ಸಿಡೆಂಟ್  
ಉಡುಪಿ

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಮೂವರು ಗಾಯ

ಇಂದಿರಾ ಎನ್ ಕೆ
ಬೆಳ್ತಂಗಡಿ; ಬೆಳಾಲು ಗ್ರಾಮದ ಕಾಡಂಡ ಸಮೀಪ ಎರಡು ಬೈಕ್‌ಗಳ ನಡುವೆ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಳಂತಿಲ ಗ್ರಾಮದ ನಿವಾಸಿ ಸಿಯಾನ್(18), ಖಲಂದರ್ ಶಾಫಿ ಹಾಗೂ ಮತ್ತೊಂದು ಬೈಕ್‌ನಲ್ಲಿದ್ದ ಅತಿಶ್ ಗಾಯಗೊಂಡವರು. ಇಳಂತಿಲದಿಂದ ಉಜಿರೆ ಕಡೆಗೆ ಬರುತ್ತಿದ್ದ ಖಲಂದರ್ ಶಾಫಿ ಚಲಾಯಿಸುತ್ತಿದ್ದ ಬೈಕ್‌ಗೆ ಉಜಿರೆ ಕಡೆಯಿಂದ ಅತಿಶ್ ಚಲಾಯಿಸುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದು ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಂಭೀರವಾಗಿ ಗಾಯಗೊಂಡ ಖಲಂದರ್ ಶಾಫಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.