ಶಾಸಕ ಯಶಪಾಲ್ ಎ. ಸುವರ್ಣ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.
ಉಡುಪಿ: ದೇಶದ ಏಕತೆ, ಅಭಿವೃದ್ದಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಯುವಶಕ್ತಿ ದೇಶದ ಆಸ್ತಿಯಾಗಿದ್ದು, ಅಖಂಡತೆಯನ್ನು ರಕ್ಷಿಸಲು ಪ್ರೇರಣೆ ನೀಡಬೇಕು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಹೇಳಿದರು.
ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಣಿಪಾಲದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಂ ಸಂಸ್ಥೆಗಳ ಸಹಯೋಗದಲ್ಲಿ ಮಣಿಪಾಲ ಕೆನರಾ ಬ್ಯಾಂಕ್ನ ವೃತ್ತ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಅವರು ಮಾತನಾಡಿದರು.
ಶಾಸಕ ಯಶಪಾಲ್ ಎ. ಸುವರ್ಣ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭ ಆದರ್ಶ ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್, ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆ ಸಮೂಹ ಸಂಸ್ಥೆಗಳ ವೈದ್ಯಕಿಯ ನಿರ್ದೇಶಕ ಡಾ. ಕೃಷ್ಣಪ್ರಸಾದ್, ಕೆನರಾ ಬ್ಯಾಂಕ್ನ ಡಿಜಿಎಂ ಅಶೋಕ್ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಟಿ, ಪ್ರಭಾಕರ್ ಪೂಜಾರಿ, ದಿನೇಶ್ ಅಮೀನ್, ಉದ್ಯಮಿ ಅಜೆಯ್ ಪಿ. ಶೆಟ್ಟಿ, ಶ್ರೀನಿವಾಸ ಪೂಜಾರಿ, ಡಾ.ವಿಜಯೇಂದ್ರ ವಸಂತ್, ಶಿವಾನಂದ ನಾಯಕ್, ದಿನಕರ್ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್ ಅಲೆವೂರು, ಮಟ್ಟಾರು ವಸಂತ್ ಕಿಣಿ, ಉಮೇಶ್ ನಾಯ್ಕ್, ರಾಜು ಕುಲಾಲ್, ದಿನೇಶ್ ಸಹಿತ ಮೊದಲಾದವರು ಉಪಸ್ಥಿತರಿದ್ದರು.
ಟೈಗರ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಕಾಯಿನ್ ಸರ್ಕಲ್ನಲ್ಲಿ ಯಾತ್ರೆ ಸಮಾಟನಗೊಂಡಿತು. ಸಾವಿರಾರು ವಿದ್ಯಾರ್ಥಿಗಳು, ನಾಗರಿಕರು ಭಾಗವಹಿಸಿದ್ದರು.
ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ, ಬಲಿದಾನಗೈದವರ, ಹಗಲಿರುಳೆನ್ನೆದೇ ದೇಶದ ಗಡಿ ಕಾಯುತ್ತಿರುವ ವೀರ ಯೋಧರ ಸ್ಮರಣೆ ಹಾಗೂ ದೇಶದ ಅಖಂಡತೆ, ಒಗ್ಗಟ್ಟಿನ ಪ್ರದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.