ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಬಟ್ಟೆ ಚೀಲಗಳನ್ನು ಹಂಚಲಾಯಿತು. ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪುಷ್ಪರಾಜ್ ಬಿ.ಎನ್., ಜನಶಿಕ್ಷಣ ಟ್ರಸ್ಟಿನ ಕೃಷ್ಣ ಮೂಲ್ಯ ಇನ್ನಿತರರು ಉಪಸ್ಥಿತರಿದ್ದರು.  
ಉಡುಪಿ

ಬಯಲು ಶೌಚಮುಕ್ತ ಜಿಲ್ಲೆ ಇಂದು ಕಸಾಲಯ

ಉಳ್ಳಾಲ: ಬಯಲು ಶೌಚಮುಕ್ತ ಜಿಲ್ಲೆಯಾಗಿದ್ದ ಪ್ರದೇಶ ಇಂದು ಬಯಲು ಕಸಾಲಯವಾಗಿ ರೂಪುಗೊಳ್ಳುತ್ತಿದೆ. ಕಸಾಲಯವೇ ವಿಷಾಲಯವಾಗಿ, ವಿಷಾಲಯವೇ ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಆತಂಕ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಸ್ವಚ್ಛ ಭಾರತ್ ಮಿಷನ್ ಮಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ, ಉಳ್ಳಾಲ ಪ್ರೆಸ್‌ಕ್ಲಬ್ ಹಾಗೂ ಹಸಿರುದಳದ ನೇತೃತ್ವದಲ್ಲಿ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಗುರುವಾರ ಫ್ರೀಡಂ ಫ್ರಮ್ ಪ್ಲಾಸ್ಟಿಕ್ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪುಷ್ಪರಾಜ್ ಬಿ.ಎನ್., ಜನಶಿಕ್ಷಣ ಟ್ರಸ್ಟಿನ ಕೃಷ್ಣ ಮೂಲ್ಯ, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಉಳ್ಳಾಲ ಪ್ರೆಸ್‌ಕ್ಲಬ್ ಅಧ್ಯಕ್ಷ ವಸಂತ್ ಎನ್.ಕೊಣಾಜೆ, ನಿಟ್ಟೆ ಕಾಲೇಜು ಉಪನ್ಯಾಸಕ ಎಚ್.ಟಿ.ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಹಸಿರುದಳ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯಕ್ ತೊಕ್ಕೊಟ್ಟು ವಂದಿಸಿದರು. ಪ್ರಜ್ವಲ್ ನಿರೂಪಿಸಿದರು.