ಕಲಾ ತರಬೇತಿ ಕಾರ್ಯಕ್ರಮವನ್ನು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ತರಬೇತುದಾರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 
ಉಡುಪಿ

ಮಕ್ಕಳ ಪ್ರತಿಭೆ ಹೊರತರಲು ತರಬೇತಿ ಸಹಕಾರಿ

ಕುಂದಾಪುರ: ಪರಿಶಿಷ್ಟ ಸಮುದಾಯದ ಮಕ್ಕಳಲ್ಲಿ ಅಡಗಿರುವ ಕಲಾ ಪ್ರತಿಭೆ ಹೊರತರಲು ತರಬೇತಿಗಳು ಸಹಕಾರಿ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಉಪಯೋಜನೆಯಡಿ ಆಯೋಜಿಸಲಾಗಿದ್ದ ಕಲಾ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ನೃತ್ಯ ರೂಪಕ ಮತ್ತು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕಂಸಾಳೆ ಜಾನಪದ ನೃತ್ಯ ತರಬೇತಿ ನೀಡಲಾಗುವುದು. ಜಾನಪದ ಕಲೆ ಉಳಿಸಿ ಬೆಳೆಸುವ ಜತೆಗೆ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಕಲಾ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸುವುದು ತರಬೇತಿಯ ಮುಖ್ಯ ಉದ್ದೇಶ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ತರಬೇತುದಾರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.