ಸಹಕಾರಿ ಸಂಘದ ಸಿಬ್ಬಂದಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಗಾರವನ್ನು ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಉದ್ಘಾಟಿಸಿದರು. ಶಶಿಕುಮಾರ್ ರೈ ಬಾಲ್ಯೊಟ್ಟು, ತ್ರಿವೇಣಿ ರಾವ್, ರವೀಂದ್ರ ಕಂಬಳಿ ಉಪಸ್ಥಿತರಿದ್ದರು.  
ಉಡುಪಿ

ಉತ್ತಮ ವ್ಯವಹಾರ ಕೌಶಲಕ್ಕೆ ತರಬೇತಿ ಅಗತ್ಯ

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಕಾನೂನುಗಳು ಬದಲಾಗುತ್ತಿದ್ದಂಯೇ ಸಹಕಾರಿ ಕ್ಷೇತ್ರದ ಸಿಬ್ಬಂದಿಗೆ ಹೊಸ ಸವಾಲುಗಳು ಎದುರಾಗುತ್ತಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಅರಿವು ಮೂಡಿಸುವುದರ ಜತೆಗೆ ಗ್ರಾಹಕರೊಂದಿಗೆ ಉತ್ತಮ ವ್ಯವಹಾರ ಮಾಡಲು ನಿರ್ದಿಷ್ಟ ತರಬೇತಿ ಕಾರ್ಯಗಾರಗಳು ಸಹಕಾರಿಯಾಗಲಿವೆ ಎಂದು ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿಗಮದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಭಿಪ್ರಾಯಪಟ್ಟರು.
ದ.ಕ. ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಬಿ.ಸಿ.ರೋಡು, ದ.ಕ. ಜಿಲ್ಲಾ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಸಿಬ್ಬಂದಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಸಹಕಾರಿ ಕ್ಷೇತ್ರ ಪವಿತ್ರವಾದುದು. ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ಕಾರ್ಯವನ್ನು ಇಲ್ಲಿನ ಸಹಕಾರಿ ಸಂಘಗಳು ಮಾಡುತ್ತಿವೆ ಎಂದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಸವಿತಾ ಎನ್.ಶೆಟ್ಟಿ, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾ ಮಂಡಳ ಉಪಾಧ್ಯಕ್ಷ ರಾಜೇಶ್ ಸುವರ್ಣ, ನಿರ್ದೇಶಕರಾದ ಆರ್.ಸಿ.ನಾರಾಯಣ್, ಬಿ.ವಿಶ್ವನಾಥ, ಅಣ್ಣಿ ಯಾನೆ ನೋಣಯ್ಯ ಪೂಜಾರಿ, ಗಣೇಶ್ ಪೂಜಾರಿ, ಶಿವಪ್ಪ ಸುವರ್ಣ, ವಿಶ್ವನಾಥ ಪೂಜಾರಿ ಪಂಜ, ಪುರುಷ ಎನ್.ಸಾಲಿಯಾನ್ ಉಪಸ್ಥಿತರಿದ್ದರು. ವಸಂತ ಅಡ್ಯಂತ್ತಾಯ, ಜಗದೀಶ್ ರಾಮ್, ಎನ್.ಜೆ.ಗೋಪಾಲ್ ತರಬೇತಿ ನೀಡಿದರು. ಕಿಶೋರ್ ಕುಮಾರ್ ವಂದಿಸಿದರು. ಎಸ್.ವಿ.ಹಿರೇಮಠ್ ಕಾರ್ಯಕ್ರಮ ನಿರೂಪಿಸಿದರು.