ಉಡುಪಿಯ ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಕಾಲೇಜ್​ನಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಸಚಿವ ಶಿವರಾಜ್​ ಎಸ್​. ತಂಗಡಗಿ ಮಾತನಾಡಿದರು. ವಿನಯಕುಮಾರ್​ ಸೊರಕೆ, ಪ್ರೊ. ನಿಕೇತನಾ, ಪ್ರೊ. ರಾಜೇಂದ್ರ ಕೆ., ಪ್ರೊ. ಶ್ರೀಮತಿ ಅಡಿಗ, ಪ್ರೊ. ಪಿ.ಬಿ. ಪ್ರಸನ್ನ, ವಿದ್ಯಾ ಡಿ. ಇತರರಿದ್ದರು. 
ಉಡುಪಿ

ವಿದ್ಯಾರ್ಥಿನಿಯರಿಗೆ ಇನ್ನೂ ಎರಡು ವಸತಿ ನಿಲಯ

* ಉಡುಪಿಯಲ್ಲಿ ಸಚಿವ ಶಿವರಾಜ ಎಸ್​. ತಂಗಡಗಿ ಭರವಸೆ

* ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಕಾಲೇಜ್​ಗೆ ಭೇಟಿ

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್​ 32 ಸಾವಿರ ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ. ಕಾಲೇಜ್​ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಉಡುಪಿಯಲ್ಲಿ ಇನ್ನೂ ಎರಡು ಮಹಿಳಾ ವಸತಿ ನಿಲಯ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್​ ಎಸ್​. ತಂಗಡಗಿ ಭರವಸೆ ನೀಡಿದರು.

ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಕಾಲೇಜ್​ಗೆ ಸಚಿವ ಶಿವರಾಜ್​ ಎಸ್​. ತಂಗಡಗಿ ಭೇಟಿ ನೀಡಿದರು.

ಉಡುಪಿಯ ಅಜ್ಜರಕಾಡಿನಲ್ಲಿರುವ ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್​ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಶುಕ್ರವಾರ (ಸೆ.25) ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿ, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ ಎಂದರು.

ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಸಚಿವ ಶಿವರಾಜ್​ ಎಸ್​. ತಂಗಡಗಿ ಮಾತನಾಡಿದರು.

ಮಾಜಿ ಸಚಿವ ವಿನಯಕುಮಾರ್​ ಸೊರಕೆ, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್​ ಶೆಟ್ಟಿ, ಕಾಲೇಜ್​ನ ಪ್ರಾಂಶುಪಾಲೆ ಪ್ರೊ. ನಿಕೇತನಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಪ್ರಾಧ್ಯಾಪಕರಾದ ಪ್ರೊ. ಪಿ.ಬಿ. ಪ್ರಸನ್ನ, ವಿದ್ಯಾ ಡಿ., ಡಾ. ಮಣಿಭೂಷಣ್​ ಡಿಸೋಜ, ಜಯಲಿಂಗ ಮೂರ್ತಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.