ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾ ಜೂನಿಯರ್ ಅಥ್ಲೆಟಿಕ್ಸ್ ಮೀಟ್ ಕ್ರೀಡಾಕೂಟ ಉದ್ಘಾಟಿಸಿದರು.
ಉಡುಪಿ: ಕ್ರೀಡೆಯಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಿರಂತರ ವಿವಿಧ ಸ್ಪರ್ಧಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಭಾನುವಾರ ಅಜ್ಜರಕಾಡಿನಲ್ಲಿರುವ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಉಡುಪಿ ಟ್ರ್ಯಾಕ್ ಅಂಡ್ ಫೀಲ್ಡ್ ಕ್ಲಬ್ ಆಶ್ರಯದಲ್ಲಿ ಜಿಲ್ಲಾ ಜೂನಿಯರ್ ಅಥ್ಲೆಟಿಕ್ಸ್ ಮೀಟ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು. ಆಭರಣ ಜ್ಯುವೆಲ್ಲರ್ಸ್ ಜಿಎಂ ವಿನೋದ್ ಕಾಮತ್, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಎ. ರಾಜುವೇಲು, ಎಸ್ಬಿಐ ಶಾಖಾ ಪ್ರಬಂಧಕ ಲಿಜೈ ಎಸ್., ಎಲ್ಐಸಿ ಹಿರಿಯ ಡಿವಿಶನಲ್ ಮ್ಯಾನೇಜರ್ ಗಣಪತಿ ಎನ್. ಭಟ್, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಮಹೇಶ್ ಠಾಕೂರ್, ವಕೀಲ ಮಿತ್ರಕುಮಾರ್ ಶೆಟ್ಟಿ ಹಾಗೂ ಉಡುಪಿ ರನ್ನರ್ಸ್ ಕ್ಲಬ್ ಅಧ್ಯಕ್ಷ ಸತೀಶ್ ಸಾಲ್ಯಾನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ವಕೀಲ ಮೊಹಮ್ಮದ್ ಹಬೀಬ್ ಉಪಸ್ಥಿತರಿದ್ದರು. ಸಂಘಟಕ ದಿನೇಶ್ ಕುಮಾರ್ ಎ. ಸ್ವಾಗತಿಸಿದರು. ವರದರಾಜ್ ಕಾರ್ಯಕ್ರಮ ನಿರೂಪಿಸಿದರು.