ಬೈಂದೂರು: ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸುವ ಜತೆಗೆ ಮಕ್ಕಳಿಗೆ ವಾನಸಿಕ ಮತ್ತು ಶಾರೀರಿಕವಾಗಿ ಬಲಗೊಳ್ಳಲು ಸಹಕಾರಿಯಾಗುತ್ತವೆ. ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದರೆ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶ ಪಡೆಯಬಲ್ಲರು ಎಂದು ಕೊಲ್ಲೂರು ಆರಕ್ಷಕ ಠಾಣಾಧಿಕಾರಿ ವಿನಯ್ ಕೊರ್ಲಹಳ್ಳಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಶಾಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ ಉದ್ಘಾಟಿಸಿ ವಾತನಾಡಿದರು.
ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ. ಶುಭಹಾರೈಸಿದರು. ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್ ಪೂಜಾರಿ, ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂದ ಕೋಶಾಧಿಕಾರಿ ಸೌಜನ್ಯಾ ಹೆಗ್ಡೆ, ಜಿಲ್ಲಾ ಅಮೆಚೂರ್ ನೆಟ್‌ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಸಚಿನ ಕುವಾರ್ ಶೆಟ್ಟಿ ಉಪಸ್ಥಿತರಿದ್ದರು. ಸುಕೇಶ ಶೆಟ್ಟಿ ಸ್ವಾಗತಿಸಿದರು. ನಾಗರಾಜ ಅಡಿಗ ವಂದಿಸಿದರು. ಸುಚಿತಾ ಶೆಟ್ಟಿ ನಿರೂಪಿಸಿದರು.
ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ ಪಡೆಯಿತು. ಬಾಲಕರ ವಿಭಾದಲ್ಲಿ ಜನತಾ ಪದವಿಪೂರ್ವ ಕಾಲೇಜು ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.
ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮ ಹಾಗೂ ಕ್ರೀಯಾಶಿಲ. ದೈಹಿಕ ಸದೃಢತೆ ಕಾಯ್ದುಕೊಳ್ಳಲು ವ್ಯಾಯಾಮ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸುವಂತೆ ಪಾಲಕರು ನೋಡಿಕೊಳ್ಳಬೇಕು.ಕೆ.ಬಾಬು ಶೆಟ್ಟಿ ಅಧ್ಯಕ್ಷ, ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ