ಬಾಗಿಲು ಅಳವಡಿಸದ ಖಾಸಗಿ ಬಸ್ಗಳ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಆರ್ಟಿಒ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿರುವುದು.
* ಉಡುಪಿ ಜಿಲ್ಲಾ ಪೊಲೀಸ್, ಆರ್ಟಿಒ ಜಂಟಿ ಕಾರ್ಯಾಚರಣೆ
ಉಡುಪಿ: ಜಿಲ್ಲೆಯಲ್ಲಿ ಖಾಸಗಿ ಬಸ್ಗಳ ಸಂಚಾರ ವ್ಯವಸ್ಥೆಯಲ್ಲಿ ನಿಗಾ ವಹಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಬಾಗಿಲು ಅಳವಡಿಸದ ಬಸ್ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಈವರೆಗೆ 23 ಬಸ್ಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ 15 ಪ್ರಕರಣ ಹಾಗೂ ಕುಂದಾಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 8 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಆರ್ಟಿಒ ಅವರೊಂದಿಗೆ ಜಂಟಿಯಾಗಿ ನಡೆಸಲಾಗಿದ್ದು, ಒಟ್ಟು 11,500 ರೂ. ದಂಡ ವಸೂಲಿ ಮಾಡಲಾಗಿದೆ. ಸದರಿ ಕಾರ್ಯಚರಣೆ ಮುಂದುವರಿಯಲಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಯಾವುದೇ ಬಸ್ನ ಮಾಲೀಕರು ಬಾಗಿಲು ಅಳವಡಿಸಿಕೊಳ್ಳದಿದ್ದಲ್ಲಿ ಅಂತಹ ಬಸ್ಗಳ ಎಫ್ಸಿಆರ್ ನವೀಕರಣ ಮಾಡದಂತೆ ಜಿಲ್ಲಾಧಿಕಾರಿಯೂ ಸಹ ಇತ್ತೀಚೆಗೆ ನಡೆಸಿದ ರಸ್ತೆ ಸುರಕ್ಷತಾ ಮಾರ್ಗಸೂಚಿ ಸಭೆಯಲ್ಲಿ ಸೂಚನೆ ನೀಡಿದ್ದರು. ಹೀಗಾಗಿ ಜಂಟಿ ಕಾರ್ಯಾಚರಣೆ ನಡೆದಿದೆ ಎಂದು ಎಸ್ಪಿ ತಿಳಿಸಿದ್ದಾರೆ.