ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ. 
ಉಡುಪಿ

ಜು.1ರಂದು ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ

* ಪತ್ರಕರ್ತರಿಗೆ ಕಾರ್ಯಾಗಾರ

* ಪ್ರತಿಭಾ ಪುರಸ್ಕಾರ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲೊಂಬಾರ್ಡ್​ ಮೆಮೋರಿಯಲ್​ (ಮಿಷನ್​) ಆಸ್ಪತ್ರೆಯ ಸಹಯೋಗದೊಂದಿಗೆ ಜು.1ರಂದು ಬೆಳಗ್ಗೆ 10:30ಕ್ಕೆ ಉಡುಪಿಯ ಐಎಂಎ ಭವನದಲ್ಲಿ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿದೆ.
ಪತ್ರಕರ್ತರಿಗೆ ಒತ್ತಡ ನಿರ್ವಹಣೆ ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ಸಂಪನ್ಮೂಲ ವ್ಯಕ್ತಿ ಡಾ.ಸಂತೋಷ್​ ಅವರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಯಾಗಿ ಉಡುಪಿ ಮಿಷನ್​ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್​ ಜತ್ತನ್ನ ಪಾಲ್ಗೊಳ್ಳಲಿದ್ದು, ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಬಾರಿಯ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು. ಹಿರಿಯ ವ್ಯಂಗ್ಯ ಚಿತ್ರಕಾರ ಜೇಮ್ಸ್​ ವಾಜ್​ ಅವರಿಗೆ ಪತ್ರಿಕಾ ದಿನದ ಗೌರವ ಸಲ್ಲಿಸಲಾಗುತ್ತಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್​ ಪಾಸ್​ ವಿತರಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್​ ಪೊಲ್ಯ ತಿಳಿಸಿದ್ದಾರೆ.