ಉಡುಪಿ: ಸಾರ್ವಜನಿಕರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬಂದಾಗ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಯಾವುದೇ ರೀತಿಯ ರ್ನಿಲಕ್ಷ$್ಯ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಗುವುದು ಎಂದು ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಹವಾಲು ಮತ್ತು ಮನವಿಗಳನ್ನು ನಿಯಮಾನುಸಾರ ಇಲಾಖಾ ಹಂತದಲ್ಲಿಯೇ ಮಾಡಿಕೊಡಲು ಪ್ರಯತ್ನಿಸಬೇಕು. ಸರ್ಕಾರದ ಹಂತದಲ್ಲಿ ನಡೆಯಬೇಕಿದ್ದರೆ ಮೇಲಾಧಿಕಾರಿ ಅಥವಾ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಒಂದಕ್ಕೂ ಹೆಚ್ಚು ಇಲಾಖೆಗಳಲ್ಲಿ ಕೆಲಸವಾಗಬೇಕಿದ್ದಲ್ಲಿ ಸಮನ್ವಯದೊಂದಿಗೆ ಕೆಲಸ ಕಾರ್ಯ ಮಾಡಬೇಕು. ಒಬ್ಬರು ಇನ್ನೊಬ್ಬರ ಮೇಲೆ ಹೇಳುವುದು ಸರಿಯಲ್ಲ ಎಂದರು.
ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕಿ
ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ವಾಡಿಕೆ ಮಳೆಯ ಕೊರತೆ ಉಂಟಾಗಿದೆ. ಅಂತರ್ಜಲ ಮಟ್ಟವು ಕುಸಿಯುವ ಸಾಧ್ಯತೆಗಳಿದ್ದು, ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇವೆ. ಈ ಬಗ್ಗೆ ಈಗಿನಿಂದಲೇ ಎಚ್ಚರ ವಹಿಸಬೇಕು. ಕಿಂಡಿ ಆಣೆಕಟ್ಟುಗಳಿಗೆ ಹಲಗೆಯನ್ನು ಅಳವಡಿಸಬೇಕು ಎಂದರು.
ನಿವೇಶನ ಅರ್ಜಿ ವಿಲೇವಾರಿ ಮಾಡಿ
ಕಂದಾಯ ಇಲಾಖೆಯಲ್ಲಿ ನಮೂನೆ 53, 54 ಹಾಗೂ 94 ಸಿನಲ್ಲಿ ಸಾರ್ವಜನಿಕರು ಜಮೀನು ಹಾಗೂ ನಿವೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದು, ಕಳೆದ ಎರಡು ವರ್ಷಗಳಿಂದ ವಿಲೇವಾರಿಯಾಗುತ್ತಿಲ್ಲ ಎಂಬ ದೂರುಗಳಿವೆ. ಅರ್ಜಿಗಳು ಪೋರ್ಟಲ್ಗಳಲ್ಲಿ ಸರಿಯಾಗಿ ನಮೂದಾಗದೇ ಇರುವುದು ಸಹ ಅವುಗಳ ವಿಲೇವಾರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು. ಅರ್ಹ ಇರುವ ಅರ್ಜಿಗಳನ್ನು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದರು.
ಶಾಲೆಗಳ ದುರಸ್ತಿ ಮಾಡಿ
ಶಾಲೆಗಳ ದುರಸ್ತಿ ಕಾಮಗಾರಿಗಳನ್ನು ಪೂರ್ಣಪ್ರಮಾಣದಲ್ಲಿ ಕೈಗೊಳ್ಳಬೇಕು. ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ವಿತರಣೆ ಕಾಲಕಾಲಕ್ಕೆ ಆಗಬೇಕು. ಗುಣಮಟ್ಟದ ಶೂ ವಿತರಣೆಗೆ ಕ್ರಮವಹಿಸಬೇಕು. ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಲ್ಲಿ ಪ್ರತಿಶತ@ ನೂರರಷ್ಟು ಹಾಜರಾತಿ ಇರುವಂತೆ ನೋಡಿಕೊಳ್ಳಬೇಕು ಎಂದರು.
ಮರಳು ಒದಗಿಸಿ
ಜನಸಾಮಾನ್ಯರು ಮನೆ ನಿಮಾರ್ಣ ಮಾಡಲು ಮರಳು ಸರಿಯಾಗಿ ಸಿಗುತ್ತಿಲ್ಲ ಹಾಗೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿರುವ ಬಗ್ಗೆ ಕೇಳಿ ಬರುತ್ತಿದೆ. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳು ಗಮನಹರಿಸಿ, ಸಮಸ್ಯೆ ಪರಿಹರಿಸಲು ಮುಂದಾಗಬೇಕು. ಡಿ.ಎಂ.ಎಫ್ ನಿಧಿ ಹಂಚಿಕೆಗೆ ಕ್ರಮವಹಿಸಬೇಕು ಎಂದರು.
1 ಲಕ್ಷ ರೂ. ಸರಿಯಾಗಿ ವಿನಿಯೋಗಿಸಿ
ಅಂಗನವಾಡಿಯ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ಸೌಲಭ್ಯಗಳನ್ನು ವಿತರಿಸಲು ಕ್ರಮವಹಿಸಬೇಕು. ಸಕ್ಷಂ ಅಂಗನವಾಡಿ ಯೋಜನೆಯಡಿ ಪ್ರತಿ ಅಂಗನವಾಡಿಗಳಿಗೆ ನೀಡಿರುವ 1 ಲಕ್ಷ ರೂ. ಅನುದಾನ ಸಮರ್ಪಕ ಬಳಕೆಗೆ ಒತ್ತು ನೀಡಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಎ ಸುವರ್ಣ, ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಹಾಗೂ ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿ.ಎಫ್.ಓ ರಥ್ರೇನ್ ಮತ್ತಿತರರು ಉಪಸ್ಥಿತರಿದ್ದರು.