ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿ ಆಡನ್ ಕ್ಲಿಯೋನ್.
* ಉಡುಪಿಯ ಎಂಜಿಎಂ ಕಾಲೇಜ್ ವಿದ್ಯಾರ್ಥಿಯ ಸಾಧನೆ
ಉಡುಪಿ: ಜಿಲ್ಲಾ ಶಿಕ್ಷಣ ಇಲಾಖೆ ಹಾಗೂ ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆದಿದ್ದ ಜಿಲ್ಲಾ ಮಟ್ಟದ ಲಾನ್ ಟೆನ್ನಿಸ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಉಡುಪಿ ಎಂಜಿಎಂ ಪದವಿ ಪೂರ್ವ ಕಾಲೇಜ್ನ ವಾಣಿಜ್ಯ ವಿಭಾಗದ ಪಿಯುಸಿ ವಿದ್ಯಾರ್ಥಿ ಆಡನ್ ಕ್ಲಿಯೋನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದ್ದು, ಇದೇ ಮೊದಲ ಬಾರಿಗೆ ನಮ್ಮ ಕಾಲೇಜ್ನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಅಲ್ಲಿಯೂ ಸಹ ವಿದ್ಯಾರ್ಥಿ ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆಯ ಖ್ಯಾತಿ ಹೆಚ್ಚಿಸಲಿ ಎಂದು ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.