ಬೈಂದೂರು ತಾಲೂಕು ರೈತ ಸಂದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ ಶೆಟ್ಟಿ ನೇತೃತ್ವದಲ್ಲಿ ರೈತರ ನಿಯೋಗ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು. ತಾಲೂಕಿನ ವಿವಿಧ ಭಾಗಗಳ ರೈತರು ಇದ್ದರು.
ಬೈಂದೂರು: ತಾಲೂಕು ರೈತ ಸಂದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ ಶೆಟ್ಟಿ ನೇತೃತ್ವದಲ್ಲಿ ರೈತರ ನಿಯೋಗ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿತು.
ನ್ಯಾಯ ಒದಗಿಸುವ ಭರವಸೆ
ರೈತರು ಪಪಂ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಲು ಆಗ್ರಹಿಸಿ ಕಳೆದ 292 ದಿನಗಳಿಂದ ತಾಲೂಕು ಆಡಳಿತ ಕಚೇರಿ ಎದುರು ಧರಣಿ ನಡೆಸುತ್ತಿದ್ದು, ಸಚಿವರು ಸಂಪೂರ್ಣ ಮಾಹಿತಿ ಪಡೆದು ರಾಜ್ಯ ಅಧೀನ ಕಾರ್ಯದರ್ಶಿ ಜತೆ ಸ್ಥಳದಲ್ಲೆ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ಮಾಹಿತಿ ಪಡೆದು ರೈತರ ಹೋರಾಟಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.
ತಾಲೂಕು ಆಸ್ಪತ್ರೆ ಅತ್ಯಗತ್ಯ
ಬೈಂದೂರು ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು, ಬಹುತೇಕ ಗ್ರಾಮೀಣ ಭಾಗಗಳನ್ನು ಹೊಂದಿದೆ. ಹೀಗಾಗಿ ಈ ಭಾಗದಲ್ಲಿ ತಾಲೂಕು ಆಸ್ಪತ್ರೆ ಅತ್ಯಗತ್ಯ. ಬೈಂದೂರಿಗೆ ತಾಲೂಕು ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ತಾಲೂಕು ರೈತ ಸಮಿತಿ ಪರವಾಗಿ ವೀರಭದ್ರ ಸಚಿವರಿಗೆ ಮನವಿ ನೀಡಿದರು. ತಾಲೂಕಿನ ವಿವಿಧ ಭಾಗಗಳ ರೈತರು ಇದ್ದರು.