ಕೊಕ್ಕರ್ಣೆ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ನಾರಾಯಣಗುರು ಸಭಾಭವನದಲ್ಲಿ ಜರುಗಿತು. ಆನಂದ ಸುವರ್ಣ, ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಒಕ್ಕೂಟದ ವಲಯಾಧ್ಯಕ್ಷೆ ಸುಜಾತಾ ಶೆಟ್ಟಿ ಇತರರು ಇದ್ದರು. 
ಉಡುಪಿ

ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕರ್ಣೆ ಒಕ್ಕೂಟ ಪದಗ್ರಹಣ

ಇಂದಿರಾ ಎನ್ ಕೆ
ಕೊಕ್ಕರ್ಣೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕರ್ಣೆ ವಲಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗ ನಿರ್ದೇಶಕ ಆನಂದ ಸುವರ್ಣ ಮಾತನಾಡಿ, ಸಂಘಗಳನ್ನು ಸುಸ್ಥಿರವಾಗಿ ಇಟ್ಟುಕೊಳ್ಳಬೇಕು, ಸ್ವಾಭಿಮಾನದಿಂದ ಸಂಘದಲ್ಲಿ ಆರ್ಥಿಕ ವ್ಯವಹಾರ ಮಾಡಬೇಕು ಎಂದರು.
ಶೌರ್ಯ ವಿಪತ್ತು ಘಟಕದ ಸದಸ್ಯರಿಗೆ ಬ್ಯಾಗ್ ವಿತರಿಸಲಾಯಿತು. ಸೂರಾಲು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಎನ್.ತಿಲಕ್ ಪ್ರಸಾದ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಒಕ್ಕೂಟ ವಲಯಾಧ್ಯಕ್ಷೆ ಸುಜಾತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ತಾಪಂ ಮಾಜಿ ಸದಸ್ಯ ಭುಜಂಗ ಶೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯ ಹರೀಶ್ ಶ್ಯಾನುಭಾಗ್, ಕೊಕ್ಕರ್ಣೆ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಸಂಜೀವ ಮಾಸ್ಟರ್, ಸುರೇಂದ್ರ ಕುಮಾರ್, ಶೌರ್ಯ ಘಟಕದ ಪ್ರತಿನಿಧಿಗಳು, ಸದಸ್ಯರು, ವಲಯ ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಎಸ್‌ಕೆಡಿಆರ್‌ಡಿಪಿ ತಾಲೂಕು ಯೋಜನಾಧಿಕಾರಿ ರಮೇಶ ಪಿ.ಕೆ. ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಗಣೇಶ್ ವರದಿ ವಾಚಿಸಿದರು. ಯಶೋದಾ ವಂದಿಸಿದರು. ಶಶಿಧರ ಶೆಟ್ಟಿ ನಂಚಾರು ನಿರೂಪಿಸಿದರು.