ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್​. 
ಉಡುಪಿ

ದೆಹಲಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಜ್ಯೋತಿ ಹೆಬ್ಬಾರ್​ ಖಂಡನೆ

* ಕೇಂದ್ರ ಸರ್ಕಾರದಿಂದ ಕುಮ್ಮಕ್ಕು ಆರೋಪ

ಉಡುಪಿ: ಎಸ್​ಐಆರ್​ ಪ್ರಕ್ರಿಯೆ ಮೂಲಕ ಜನರ ಮತದಾನದ ಹಕ್ಕು ಕಸಿದುಕೊಳ್ಳುತ್ತಿರುವ ಚುನಾವನಾ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನಾ ನಿರತರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮ ಖಂಡನೀಯ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುವ ಜನರು, ವಿದ್ಯಾರ್ಥಿಗಳು ಮಹಿಳಾ ಹೋರಾಟಗಾರರು ಸಂವಿಧಾನ ನೀಡಿದ ಮತದಾನದ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಗ್ರಹ ಸಚಿವ ಅಮಿತ್​ ಷಾ ಕುಮ್ಮಕ್ಕಿನಿಂದ ದೆಹಲಿ ಪೊಲೀಸರು ನಡೆಸಿದ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ. ಫಾಮ್​ರ್ 6 ಮತ್ತು 7ರ ಮೂಲಕ ಮತದಾನದ ಹಕ್ಕು ಕಸಿದುಕೊಳ್ಳಲು ಚುನಾವಣಾ ಆಯುಕ್ತರೇ ಪ್ರಯತ್ನಿಸುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ. ಪೊಲೀಸ್​ ಅಧಿಕಾರಿಗಳ ವಿರುದ್ಧ ಮಹಿಳಾ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು.

ಬಾಯಿ ತೆರೆದರೆ 'ಭೇಟಿ ಬಚಾವೋ, ಭೇಟಿ ಪಡಾವೋ, ನಾರಿ ಸಮ್ಮಾನ್​' ಎಂದು ಆಕರ್ಷಕ ಪದಪುಂಜ ಬಳಸುವ ಪ್ರಧಾನಿ ನರೇಂದ್ರ ಮೋದಿಯವರೇ ದೆಹಲಿಯಲ್ಲೇ ನಡೆದ ಮಹಿಳಾ ದೌರ್ಜನ್ಯ ನಿಮಗೆ ಕಾಣಿಸದೇ? ಭ್ರಷ್ಟ ಚುನಾವಣಾ ಆಯುಕ್ತರನ್ನು ರಕ್ಷಿಸಲು ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಜ್ಯೋತಿ ಹೆಬ್ಬಾರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.