ಶ್ರೀ ವಿಶ್ವೇಶ ತೀರ್ಥ ಸ್ಮೃತಿವನ
ಉಡುಪಿ: ಅರಣ್ಯ ಇಲಾಖೆ ಹಾಗೂ ಶ್ರೀ ಪೇಜಾವರ ಮಠ ಸಹಯೋಗದಲ್ಲಿ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದಲ್ಲಿ ನೂತನವಾಗಿ ನಿಮಾರ್ಣಗೊಂಡಿರುವ ಶ್ರೀ ವಿಶ್ವೇಶ ತೀರ್ಥ ಸ್ಮೃತಿವನ ಉದ್ಘಾಟನಾ ಸಮಾರಂಭ ಮೇ 25ರಂದು 4:30ಕ್ಕೆ ನೆರವೇರಲಿದೆ.
ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಫೋಟೋ ಗ್ಯಾಲರಿ ಉದ್ಘಾಟಿಸಲಿದ್ದಾರೆ. ಶಾಸಕ ಯಶಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ವೈ. ರಾಘವೇಂದ್ರ , ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ ಪೂಜಾರಿ, ಶಾಸಕರಾದ ವಿ. ಸುನೀಲ್ ಕುಮಾರ್ , ಎಸ್. ಎಲ್. ಭೋಜೇಗೌಡ, ಗುರುರಾಜ್ ಶೆಟ್ಟಿ ಗಂಟಿಹೊಳೆ , ಎ. ಕಿರಣ್ ಕುಮಾರ್ ಕೊಡ್ಗಿ , ಗುರ್ಮೆ ಸುರೇಶ್ ಶೆಟ್ಟಿ , ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್ ಪುತ್ತೂರು ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.