ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಬಿ.ರಾಜೇಂದ್ರ ಕಿಣಿ ಬೆಳ್ವೆ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಡಾ.ವೆಂಕಟರಾಮ್ ಭಟ್, ಚಂದ್ರಿಕಾ, ಶಾಲಿನಿ ಪ್ರೇಮ್ ಕುವಾರ್ ಮೊದಲಾದವರಿದ್ದರು.  
ಉಡುಪಿ

ಉತ್ತಮ ಭವಿಷ್ಯಕ್ಕಾಗಿ ಮಾರ್ಗದರ್ಶನ ಶ್ರೇಷ್ಠ

ಇಂದಿರಾ ಎನ್ ಕೆ

ಶಂಕರನಾರಾಯಣ: ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಮಾರ್ಗದರ್ಶನ ನೀಡುತ್ತಿರುವುದು ಶ್ರೇಷ್ಠ ಕಾರ್ಯ ಎಂದು ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಹೇಳಿದರು.

ಆರ್ಡಿ- ಬೆಳ್ವೆ- ಗೋಳಿಯಂಗಡಿ, ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಯುವಶಕ್ತಿ ಮತ್ತು ಯುವ ಧ್ವನಿ ಸಹಯೋಗದಲ್ಲಿ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಹಮ್ಮಿಕೊಂಡ ಬದಲಾವಣೆಯತ್ತ ಒಂದು ಹೆಜ್ಜೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಸರಣಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಪನ್ಯಾಸಕ ಸಚ್ಚಿನ್ ಸ್ವಾಗತಿಸಿದರು. ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ವಂದಿಸಿದರು.