Crime 
ಉಡುಪಿ

ಪತ್ನಿಗೆ ಹಲ್ಲೆ, ಪತಿ ವಿಷ ಸೇವಿಸಿ ಅಸ್ವಸ್ಥ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿದ ಬಳಿಕ ಪತಿ ವಿಷ ಸೇವಿಸಿ ಅಸ್ವಸ್ಥಗೊಂಡ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಕುದ್ಮಾರು ನಿವಾಸಿ ಸುಚಿತ್ರಾ ಪಿ.ಜೆ. ದೂರು ನೀಡಿದ್ದಾರೆ. ಭಾನನವಾರ ಬೆಳಗ್ಗೆ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಜಗಳ ನಡೆದಿದೆ.
ಈ ವೇಳೆ ಚಿದಾನಂದ ಪತ್ನಿ ಸುಚಿತ್ರಾಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಕುಸಿದು ಬಿದ್ದ ಸುಚಿತ್ರಾ ಅವರಿಗೆ ನೆರೆಮನೆಯವರು ನೆರವು ನೀಡಿ, ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಚಿದಾನಂದ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.