ಬೈಂದೂರು: ಕೊಲ್ಲೂರಿನ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ಕೇರಳದ ಕೊಟ್ಟಾಯಂ ಜಿಲ್ಲೆಯ ಧನ್ಯಶ್ರೀ ಎನ್.(35) ಎಂಬುವರ ಮೃತದೇಹ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜುಲೈ 19ರಂದು ಸಂಜೆ ಕೊಲ್ಲೂರಿನ ಖಾಸಗಿ ಲಾಡ್ಜ್‌ನಲ್ಲಿ ಧನ್ಯಶ್ರೀ ವಾಸ್ತವ್ಯಕ್ಕೆ ಕೊಠಡಿ ಪಡೆದಿದ್ದರು. 21ರಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅವರು ಕೊಠಡಿಯಿಂದ ಹೊರಗೆ ಬರಲಿಲ್ಲ. ಮಧ್ಯಾಹ್ನದ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಹೀಗಾಗಿ ಕಿಟಕಿಯಿಂದ ಒಳಗೆ ನೋಡಿದಾಗ ಕೊಠಡಿಯೊಳಗೆ ಮಹಿಳೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಜುಲೈ 20ರಂದು ರಾತ್ರಿ 8.30ರಿಂದ 21ರ ಮಧ್ಯಾಹ್ನ 2.30ರ ಅವಧಿಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.