ಕುಂದಾಪುರ: ಕುಂದಾಪುರ ಸಂತೆ ವಾರ್ಕೆಟ್ ಎದುರುಗಡೆಯ ಕೆನರಾ ಬ್ಯಾಂಕ್ ಎಟಿಎಂ ಹತ್ತಿರ ರಾ.ಹೆ.66ರಲ್ಲಿ ಸಂಗಮ್ ಕಡೆಯಿಂದ ಶಾಸ್ತ್ರಿ ಪಾರ್ಕ್ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ರಸ್ತೆಯ ಎಡಬದಿಯಲ್ಲಿ ನಿಂತಿದ್ದ ಹಂಗಳೂರು ಗ್ರಾಮದ ಗೀತಾ(62) ಎಂಬುವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದಾರೆ.
ಅವರಿಗೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.