Death 
ಉಡುಪಿ

ಅಪಘಾತ ಗಾಯಾಳು ಮಹಿಳೆ ಸಾವು

ಕಾಸರಗೋಡು: ಕ್ಷೇತ್ರ ದರ್ಶನ ಮುಗಿಸಿ ವಾಪಸಾಗುತ್ತಿದ್ದ ಸಂದರ್ಭ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲಿಕಡವು ನಿವಾಸಿ ದಿ.ಕುಞಿಕಣ್ಣನ್ ಪತ್ನಿ ಕಾರ್ತ್ಯಾಯಿನಿ (68) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಆ.2ರಂದು ಏಚಿಕುಳಂಗರ ಶ್ರೀನಾರಾಯಣಪುರಂ ಕ್ಷೇತ್ರ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಾಲಿಕಡವು ರಾ.ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಪೆರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.