ಚಿನ್ನಮ್ಮ  
ಉಡುಪಿ

ಮಹಿಳೆ ಮೃತದೇಹ ಕೆರೆಯಲ್ಲಿ ಪತ್ತೆ

ಇಂದಿರಾ ಎನ್ ಕೆ
ಕೊಕ್ಕಡ: ಗ್ರಾಮದ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಎಂಬುವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ಸೆ.18ರಂದು ಪತ್ತೆಯಾಗಿದೆ. ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಆಗಮಿಸಿ ಶವ ಮೇಲೆತ್ತಲು ಸಹಕರಿಸಿದರು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿನ್ನಮ್ಮ ಅವರ ನಿಧನಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.