Death 
ಉಡುಪಿ

ಮಹಿಳೆ ಮೃತದೇಹ ಬಾವಿಯಲ್ಲಿ ಪತ್ತೆ

ಇಂದಿರಾ ಎನ್ ಕೆ

ಕಾಸರಗೋಡು: ಅಡೂರು ದೇಲಂಪಾಡಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ದೇಲಂಪಾಡಿ ನಿವಾಸಿ,ಸಜಿತ್ ಎಂಬವರ ಪತ್ನಿ ಸುಶೀಲಾ(44) ಮೃತೆ. ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಸುಶೀಲಾ ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸುಶೀಲಾ ಅವರು ಮನೆಯಿಂದ ನಾಪತ್ತೆಯಾದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸುವ ಮಧ್ಯೆ ನೆರೆಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ಆದೂರು ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.